SUDDIKSHANA KANNADA NEWS/DAVANAGERE/DATE:18_12_2025
ಬೆಳಗಾವಿ: ರಾಜ್ಯದ ಯಾವುದೇ ಆರ್‌ಟಿಒ ಕಚೇರಿಗಳಲ್ಲಿ ಐಷಾರಾಮಿ ಕಾರುಗಳ ನೋಂದಣಿಯಲ್ಲಿ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ, ನಿಜವಾದ ವಾಹನದ ಮೌಲ್ಯವನ್ನು ಮರೆಮಾಚಿ ರಿಜಿಸ್ಟ್ರೇಷನ್ ಮಾಡಿರುವುದು, ಮಾಡುವುದು ಸರ್ಕಾರದ ಗಮನಕ್ಕೆ ಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಮಂಗಳೂರು ಮತ್ತು ಉಡುಪಿ ಆರ್‌ಟಿಒ ಕಚೇರಿಗಳಲ್ಲಿ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ, ಕಾರಿನ ನಿಜವಾದ ಮೌಲ್ಯವನ್ನು ಮರೆಮಾಚಿ, ಸರ್ಕಾರದ ಬೊಕ್ಕಸಕ್ಕೆ ನಷ್ಟವುಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಕಛೇರಿಯ ಕೇಂದ್ರ ಸ್ಥಾನೀಯ ಸಹಾಯಕರು, ಅಧೀಕ್ಷಕರು ಮತ್ತು ಪ್ರಥಮ ದರ್ಜೆ ಸಹಾಯಕರು ಹಾಗೂ ಉಡುಪಿ ಕಛೇರಿಯ ಅಧೀಕ್ಷಕರನ್ನು ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ. ಈ ಸಂಬಂಧ ಇಲಾಖಾ ವಿಚಾರಣೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರ ಪ್ರಸ್ತಾವನೆಯ ಮೇರೆಗೆ ಉಡುಪಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ವಿರುದ್ಧ ವಿಚಾರಣೆ, ತನಿಖೆ ಕೈಗೊಳ್ಳಲು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯ ಕಲಂ 17(ಎ) ಅನ್ವಯ ಪೂರ್ವಾನುಮತಿಯನ್ನು ಸಹ ನೀಡಲಾಗಿರುತ್ತದೆ
ಎಂದು ಮಾಹಿತಿ ನೀಡಿದರು.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಶರವಣ ಟಿ ಎ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರ ಉತ್ತರಿಸಿದರು.





Leave a comment