SUDDIKSHANA KANNADA NEWS/DAVANAGERE/DATE:25_12_2025
ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್‌ನಲ್ಲಿದ್ದ ಹಲವು ಪ್ರಯಾಣಿಕರು ಸಜೀವ ದಹನವಾಗಿರುವ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್, ಕೇಂದ್ರ ಸಚಿವ ವಿ. ಸೋಮಣ್ಣ, ಮಾಜಿ ಸಿಎಂಗಳಾದ ಬಿ. ಎಸ್. ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.
ಗಾಯಾಳುಗಳು ಶೀಘ್ರವೇ ಚೇತರಿಸಿಕೊಳ್ಳಲಿ, ಮೃತರ ಆತ್ಮಕ್ಕೆ ಭಗವಂತ ಸದ್ಗತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.
ಘಟನೆ ಮರುಕಳಿಸದಿರಲಿ: ವಿ. ಸೋಮಣ್ಣ
ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಮತ್ತು ಟ್ರಕ್ ನಡುವೆ ಹಿರಿಯೂರು ಬಳಿ ಅಪಘಾತ ಸಂಭವಿಸಿ ಹಲವರು ಸಜೀವ ದಹನಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಮೃತಪಟ್ಟವರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಇಂತಹ ದುರಂತಗಳು ಮರುಕಳಿಸದಿರಲಿ ಎಂದು ಪ್ರಾರ್ಥಿಸಿದ್ದಾರೆ.
ಬಿ. ಎಸ್. ಯಡಿಯೂರಪ್ಪ ಸಂತಾಪ:
ಚಿತ್ರದುರ್ಗದಲ್ಲಿ ಹಲವರು ಸಜೀವ ದಹನವಾದ ಘಟನೆ ಕೇಳಿ ಆಘಾತವಾಗಿದೆ ಎಂದು ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ. ಮೃತರ ಕುಟುಂಬದ ನೋವಿನಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
ಬಸವರಾಜ್ ಬೊಮ್ಮಾಯಿ ಸಂತಾಪ:
ಬೆಂಗಳೂರಿನಿಂದ ಗೋಕರ್ಣಕ್ಕೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಚಿತ್ರದುರ್ಗದ ಹಿರಿಯೂರಿನ ಬಳಿ ಅಪಘಾತಕ್ಕೆ ಒಳಗಾಗಿ ಅಗ್ನಿ ಅವಘಡ ಸಂಭವಿಸಿದ್ದು ಅದರಲ್ಲಿ 9 ಕ್ಕೂ ಹೆಚ್ಚು ಜನ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ ಎಂದು ತಿಳಿದು ಅತ್ಯಂತ ದುಃಖವಾಯಿತು. ರಾಜ್ಯ ಸರ್ಕಾರವು ಕೂಡಲೇ ಪರಿಹಾರ ಘೋಷಿಸಿಬೇಕು ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಎಲ್ಲ ರೀತಿಯ ಕ್ರಮಕೈಗೊಳ್ಳಲು ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.
ದೇವರು ಮೃತರ ಆತ್ಮಕ್ಕೆ ಶಾಂತಿ ಕರುಣಿಸಲಿ, ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.





Leave a comment