Site icon Kannada News-suddikshana

ಆಸೀಸ್​ನ್ನು ಬಗ್ಗು ಬಡಿದು ಸೆಮಿಫೈನಲ್‌ಗೆ ಎಂಟ್ರಿ ಕೊಟ್ಟ ಟೀಂ ಇಂಡಿಯಾ

ಸೇಂಟ್ ಲೂಸಿಯಾದ ಗ್ರಾಸ್ ಐಲೆಟ್‌ನಲ್ಲಿರುವ ಡ್ಯಾರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಸೂಪರ್ ಸುತ್ತಿನ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಅಮೋಘ ಗೆಲುವು ದಾಖಲಿಸಿದೆ. ಇದರೊಂದಿಗೆ ಅಜೇಯ ತಂಡವಾಗಿ ಸೆಮಿಫೈನಲ್​ಗೆ ಲಗ್ಗೆ ಇಟ್ಟಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ (Team India) 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 206 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 20 ಓವರ್​ಗಳಲ್ಲಿ ಅಂತಿಮವಾಗಿ 7 ವಿಕೆಟ್ ಕಳೆದುಕೊಂಡು 181 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಇದೀಗ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ, ಇಂಗ್ಲೆಂಡ್​ ತಂಡವನ್ನು ಎದುರಿಸಲಿದೆ.

ಮೊದಲಿಗೆ ನಿರಾಶದಾಯಕ ಆರಂಭ ಕಂಡ ಇಂಡಿಯಾ ಟೀಂ 6 ರನ್ ಗಳಿಸಿದ್ದಾಗ ವಿರಾಟ್ ಕೊಹ್ಲಿ ಶೂನ್ಯ ರನ್ ಗಳಿಸಿ ಔಟಾದರು. ನಂತರ ತಂಡದ ಇನ್ನಿಂಗ್ಸ್ ಕೈಗೆತ್ತಿಕೊಂಡ ನಾಯಕ ರೋಹಿತ್ ಅಬ್ಬರದ ಬ್ಯಾಟಿಂಗ್ ಆರಂಭಿಸಿ ಕೇವಲ 19 ಎಸೆತಗಳಲ್ಲಿ ತಮ್ಮ ಅರ್ಧಶತಕವನ್ನು ಪೂರ್ಣಗಿಳಿಸಿದರು. ಇದು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನ ರೋಹಿತ್ ವೃತ್ತಿಜೀವನದಲ್ಲಿ ಅತ್ಯಂತ ವೇಗದ ಅರ್ಧಶತಕ ಎನಿಸಿಕೊಂಡಿತು. ಇನ್ನೊಂದು ಬದಿಯಲ್ಲಿ ರಿಷಬ್ ಪಂತ್ ಕೂಡ ಅವಕಾಶ ಸಿಕ್ಕಾಗ ಬಿಗ್ ಶಾಟ್ ಆಡಿ ತಂಡದ ಇನ್ನಿಂಗ್ಸ್​ನ ವೇಗ ಹೆಚ್ಚಿಸಿದರು.   Ad

Exit mobile version