ಪ್ರಯಾಗ್‌ರಾಜ್ (ಉತ್ತರ ಪ್ರದೇಶ): ಮನೆಯ ಮಹಡಿಯಲ್ಲಿ ಪೋಷಕರೊಂದಿಗೆ ಮಲಗಿದ್ದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಬಯಲು ಗದ್ದೆಯಲ್ಲಿ ಅತ್ಯಾಚಾರ ಎಸಗಿದಲ್ಲದೆ, ದೇಹದ ಭಾಗಗಳಿಗೆ ಸಿಗರೇಟ್ ನಿಂದ ಸುಟ್ಟು ವಿಕೃತಿ ಮೆರೆದಿದ್ದ ಘೋರ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಈ ಪ್ರಕರಣದ ಮುಖ್ಯ ಆರೋಪಿ ಮುಷರಫ್‌ನನ್ನು ಪೊಲೀಸರು ಭಾನುವಾರ ತಡರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಬಂಧಿಸಿದ್ದಾರೆ.
ಘಟನೆಯ ವಿವರ:
ಜೂನ್ 14 ರಂದು ಬಾಲಕಿ ತನ್ನ ಕುಟುಂಬದವರೊಂದಿಗೆ ಮನೆಯ ಟೆರೇಸ್ ಮೇಲೆ ಮಲಗಿದ್ದಾಗ ಅದೇ ಗ್ರಾಮದ ನಿವಾಸಿ ಮುಷರಫ್ ಎಂಬಾತ ಆಕೆಯನ್ನು ಅಪಹರಿಸಿದ್ದನು. ಬಳಿಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಅಷ್ಟೇ ಅಲ್ಲದೆ ಬಾಲಕಿಯ ದೇಹದಾದ್ಯಂತ ಸಿಗರೇಟಿನಿಂದ ಸುಟ್ಟು ಚಿತ್ರಹಿಂಸೆ ನೀಡಿದ್ದಾನೆ. ಬಾಲಕಿ ಪ್ರಜ್ಞೆ ತಪ್ಪಿ ಬೀಳುತ್ತಿದ್ದಂತೆ ಆರೋಪಿ ಅಲ್ಲಿಂದ ಪರಾರಿಯಾಗಿದ್ದನು. ತಡರಾತ್ರಿ ರಕ್ತದ ಮಡುವಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಕಂಡು ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರು. ಸದ್ಯ ಆಕೆಗೆ ತೀವ್ರ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸ್ ಎನ್‌ಕೌಂಟರ್:
ಆರೋಪಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದ ಪೊಲೀಸರು, ಭಾನುವಾರ ರಾತ್ರಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಮುಷರಫ್ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಆತ ಅವರ ಮೇಲೆಯೇ ಗುಂಡಿನ ದಾಳಿ ನಡೆಸಿದ್ದಾನೆ. ಪೊಲೀಸರು ಆತ್ಮರಕ್ಷಣೆಗಾಗಿ ಹಾಗೂ ಆತನನ್ನು ಹಿಡಿಯಲು ನಡೆಸಿದ ಪ್ರತಿದಾಳಿಯಲ್ಲಿ ಆರೋಪಿಯ ಎರಡೂ ಕಾಲುಗಳಿಗೆ ಗುಂಡು ತಗುಲಿದ್ದು, ಆತನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯಿಂದ ಅಕ್ರಮ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನುಳಿದ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಜಾಲ ಬೀಸಿದ್ದಾರೆ.
- illegal weapon recovered
- Manish Shandilya ADCP
- minor girl kidnapped and raped
- Musharraf encounter Prayagraj
- Prayagraj minor torture
- Prayagraj rape case
- UP Crime news
- UP police encounter
- ಅಪ್ರಾಪ್ತೆ ಅಪಹರಣ ಅತ್ಯಾಚಾರ
- ಅಪ್ರಾಪ್ತೆ ಮೇಲಿನ ದೌರ್ಜನ್ಯ
- ಉತ್ತರ ಪ್ರದೇಶ ಕ್ರೈಮ್ ನ್ಯೂಸ್
- ಪ್ರಯಾಗ್‌ರಾಜ್ ಅತ್ಯಾಚಾರ ಪ್ರಕರಣ
- ಪ್ರಯಾಗ್‌ರಾಜ್ ಕ್ರೈಮ್ ಲಿಂಕ್
- ಮುಷರಫ್ ಎನ್‌ಕೌಂಟರ್
- ಯುಪಿ ಪೊಲೀಸ್ ಎನ್‌ಕೌಂಟರ್
- ಯೋಗಿ ಪೊಲೀಸ್ ಆಕ್ಷನ್





Leave a comment