SUDDIKSHANA KANNADA NEWS/ DAVANAGERE/ DATE:22-11-2023
ದಾವಣಗೆರೆ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಚನ್ನಗಿರಿ ತಾಲೂಕಿನ ಗುರುಪುರ ಗ್ರಾಮದಲ್ಲಿ ನಡೆದಿದೆ.
ಚನ್ನಗಿರಿ ಪಟ್ಟಣದ ಪರಿಶಿಷ್ಟ ಕಾಲೋನಿ ವಾಸಿ ಜಯಪ್ಪ (54) ಸಾವು ಕಂಡ ದುರ್ದೈವಿ ಎಂದು ಗುರುತಿಸಲಾಗಿದೆ.

ಕಳೆದ ಭಾನುವಾರ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಜಯಪ್ಪರ ಮೇಲೆ ಹೆಜ್ಜೇನು ಹಿಂಡು ದಾಳಿ ನಡೆಸಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡು ಅಸ್ವಸ್ಥಗೊಂಡಿದ್ದ ಜಯಪ್ಪ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚನ್ನಗಿರಿ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.