Site icon Kannada News-suddikshana

ಬೆಳೆವಿಮೆ ಯೋಜನೆಗೆ ರೈತರ ನೋಂದಣಿ ಪ್ರಕ್ರಿಯೆ ಆರಂಭ: ಯಾರನ್ನು ಸಂಪರ್ಕಿಸಬೇಕೆಂಬ ಮಾಹಿತಿ ಇಲ್ಲಿದೆ

SUDDIKSHANA KANNADA NEWS/ DAVANAGERE/ DATE-25-06-2025

ದಾವಣಗೆರೆ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರುವಿನ್ಯಾಸಗೊಳಿಸಿದ ಹವಮಾನ ಆಧಾರಿತ ಬೆಳೆ ವಿಮೆ ಯೋಜನೆಯಲ್ಲಿ ರೈತರ ನೊಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ.

ರೈತರು ತಮ್ಮ ಬೆಳೆಗಳಿಗೆ ವಿಮಾ ಕಂತನ್ನು ಹತ್ತಿರದ ಬ್ಯಾಂಕ್, ಗ್ರಾಮಒನ್ ಹಾಗೂ ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿ ಈ ವಿಮಾ ಯೋಜನೆಗೆ ಪಾವತಿಸಿ ನೋಂದಣಿಯಾಗಬಹುದು.

ಅಡಿಕೆ, ದಾಳಿಂಬೆ, ಕಾಳುಮೆಣಸು, ವಿಳ್ಯದೆಲೆಗೆ ವಿಮೆ ಮಾಡಿಸಲು ಜೂನ್ 30 ಕೊನೆಯ ದಿನ. ಮಾವು ವಿಮೆಗೆ ಜುಲೈ.30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಹೆಚ್.ಡಿ.ಎಫ್.ಸಿ ಎರ್ಗೋ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ವಿಮಾ ಸಂಸ್ಥೆಯ ಅಧಿಕಾರಿಗಳ ಮೊ.ಸಂ:9743855126, 8431462824, 8971608962 ಟೋಲ್ ಫ್ರೀ ನಂಬರ್ 18002660700 ಮತ್ತು ಸಂಬಂಧಪಟ್ಟ ತಾಲ್ಲೂಕು ಅಧಿಕಾರಿಗಳು, ರೈತ ಸಂಪರ್ಕ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ತೋಟಗಾರಿಕೆ ಉಪನಿರ್ದೇಶಕ ರಾಘವೇಂದ್ರ ಪ್ರಸಾದ್ ತಿಳಿಸಿದ್ದಾರೆ.

Exit mobile version