Home ದಾವಣಗೆರೆ ಬೆಳೆ ಸಮೀಕ್ಷೆ ರೈತರ ಆ್ಯಪ್ʼನಲ್ಲಿ ಮಾಹಿತಿ ನಮೂದು: ವ್ಯತ್ಯಾಸಗಳು ಕಂಡುಬಂದರೆ ಆಕ್ಷೇಪಣೆಗೆ ಅವಕಾಶ!
ದಾವಣಗೆರೆನವದೆಹಲಿಬೆಂಗಳೂರು

ಬೆಳೆ ಸಮೀಕ್ಷೆ ರೈತರ ಆ್ಯಪ್ʼನಲ್ಲಿ ಮಾಹಿತಿ ನಮೂದು: ವ್ಯತ್ಯಾಸಗಳು ಕಂಡುಬಂದರೆ ಆಕ್ಷೇಪಣೆಗೆ ಅವಕಾಶ!

Share
Share

SUDDIKSHANA KANNADA NEWS/DAVANAGERE/DATE:17_12_2025

ಬೆಳಗಾವಿ: ಕೃಷಿ ಜಮೀನುಗಳಲ್ಲಿ ಬೆಳೆ ಸಮೀಕ್ಷೆಯನ್ನು ಸ್ವತಃ ರೈತರೇ ʼಬೆಳೆ ಸಮೀಕ್ಷೆ ರೈತರ ಆ್ಯಪ್ʼನಲ್ಲಿ ಮಾಹಿತಿ ನಮೂದಿಸಲು ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ವ್ಯತ್ಯಾಸಗಳು ಕಂಡುಬಂದಲ್ಲಿ ರೈತರು ನಿಗದಿತ ಸಮಯದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ತಿಳಿಸಿದ್ದಾರೆ.

ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲ ರೈತರ ತಾಕುಗಳ ಬೆಳೆ ಮಾಹಿತಿ ದಾಖಲಿಸುವ ಸಲುವಾಗಿ ಆದ್ಯತೆ ಮೇರೆಗೆ ಪ್ರಥಮವಾಗಿ ಸ್ವತಃ ರೈತರೇ “ಬೆಳೆ ಸಮೀಕ್ಷೆ ರೈತರ ಆ್ಯಪ್” ನಲ್ಲಿ ಬೆಳೆ ಮಾಹಿತಿ ನಮೂದಿಸಲು ಅವಕಾಶ ಕಲ್ಪಿಸಲಾಗಿದೆ. ಸಕಾಲದಲ್ಲಿ ರೈತರು ಬೆಳೆ ಸಮೀಕ್ಷೆ ಮಾಡದೇ ಇದ್ದಲ್ಲಿ ಖಾಸಗಿ ನಿವಾಸಿಗಳ ಮೂಲಕ ಬೆಳೆ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಖಾಸಗಿ ನಿವಾಸಿಗಳ ಬದಲಿಗೆ ಸಂಘ ಸಂಸ್ಥೆಗಳ ಮೂಲಕ ಬೆಳೆ ಸಮೀಕ್ಷೆ ಮಾಡಿಸಲು ಅವಕಾಶ ಕಲ್ಪಿಸಿಲ್ಲ. ಬೆಳೆ ಮಾಹಿತಿ ಕುರಿತಂತೆ ಯಾವುದೇ ವ್ಯತ್ಯಾಸಗಳು ಕಂಡುಬಂದಲ್ಲಿ ರೈತರು ನಿಗದಿತ ಸಮಯದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಪ್ರತಿ ವರ್ಷ ಸುಮಾರು 4.40 ಕೋಟಿ ತಾಕುಗಳ ಬೆಳೆ ಸಮೀಕ್ಷೆ ಕೈಗೊಳ್ಳಲಾಗುತ್ತಿದ್ದು, ಸುಮಾರು 2 ಲಕ್ಷ ಆಕ್ಷೇಪಣೆಗಳೂ ಕೂಡ ಸಲ್ಲಿಕೆಯಾಗುತ್ತಿದೆ. ಇಂತಹ ಪ್ರಕರಣಗಳಲ್ಲಿ ಮರು ಸಮೀಕ್ಷೆ ಮಾಡಿಸಿದ್ದೇವೆ. ಅಧಿಕಾರಿ, ಸಿಬ್ಬಂದಿಗಳು ಎಲ್ಲಿಯೋ ಕುಳಿತು ಬೆಳೆ ಸಮೀಕ್ಷೆ ಮಾಡಲು ಅವಕಾಶ ಇರುವುದಿಲ್ಲ ಎಂದು ಮಾಹಿತಿ ನೀಡಿದರು.

ದಟ್ಟ ಅರಣ್ಯ ಹಾಗೂ ಅಭಯಾರಣ್ಯ ಪ್ರದೇಶಗಳಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳಲಾಗುತ್ತಿಲ್ಲ. ಅಭಯಾರಣ್ಯ ಪ್ರದೇಶಗಳ ಅಂಚಿನ ಗ್ರಾಮಗಳಲ್ಲಿ ಬೆಳೆ ಸಮೀಕ್ಷೆ ಕಾರ್ಯ ಕೈಗೊಳ್ಳಲು ತೊಂದರೆಯಾಗುತ್ತಿರುವ ಕುರಿತಂತೆ ಯಾವುದೇ ದೂರು ಸಲ್ಲಿಕೆಯಾಗಿಲ್ಲ. ರೈತರೇ ಸ್ವತಃ ಬೆಳೆ ಸಮೀಕ್ಷೆಗೆ ಅವಕಾಶ ಕಲ್ಪಿಸಿರುವುದರಿಂದ ಈ ಸಮಸ್ಯೆ ಉದ್ಭವಿಸಿಲ್ಲ ಎಂದರು.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಜಿ.ಹೆಚ್. ಶ್ರೀನಿವಾಸ್ ಅವರ ಪ್ರಶ್ನೆಗೆ ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರು ಉತ್ತರಿಸಿದರು.

Share

Leave a comment

Leave a Reply

Your email address will not be published. Required fields are marked *