Home ಉದ್ಯೋಗ ವಾರ್ತೆ ಸಿ.ಎಸ್.ಐ.ಆರ್-ಸಿಎಫ್‌ಟಿಆರ್‌ಐನ 28 ಐಟಿಐ ತಂತ್ರಜ್ಞ ಹುದ್ದೆಗಳಿಗೆ ಅರ್ಜಿ ಆಹ್ವಾನ
ಉದ್ಯೋಗ ವಾರ್ತೆದಾವಣಗೆರೆಬೆಂಗಳೂರು

ಸಿ.ಎಸ್.ಐ.ಆರ್-ಸಿಎಫ್‌ಟಿಆರ್‌ಐನ 28 ಐಟಿಐ ತಂತ್ರಜ್ಞ ಹುದ್ದೆಗಳಿಗೆ ಅರ್ಜಿ ಆಹ್ವಾನ

Share
ಹುದ್ದೆ
Share

ದಾವಣಗೆರೆ: ಮೈಸೂರಿನ ಸಿ.ಎಸ್.ಐ.ಆರ್-ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯದಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ 28 ತಂತ್ರಜ್ಞ  ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಐ.ಟಿ.ಐ ವಿದ್ಯಾರ್ಹತೆ ಹೊಂದಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

ಫಿಟ್ಟರ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಎಲೆಕ್ಟ್ರಿಷಿಯನ್, ಕೋಪಾ ಸೇರಿದಂತೆ ವಿವಿಧ ಟ್ರೇಡ್‌ಗಳಲ್ಲಿ ಈ ಹುದ್ದೆಗಳು ಲಭ್ಯವಿದ್ದು, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ನೋಂದಾಯಿಸಿಕೊಳ್ಳಬಹುದು.

ಹುದ್ದೆಗಳ ವಿವರ: ಫಿಟ್ಟರ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಇನ್‌ಸ್ಟ್ರುಮೆಂಟ್ ಮೆಕ್ಯಾನಿಕ್, ಲ್ಯಾಬ್ ಅಸಿಸ್ಟೆಂಟ್ (ಕೆಮಿಕಲ್ ಪ್ಲಾಂಟ್), ಕೋಪಾ, ಐಸಿಟಿಎಂ, ಎಸಿ ಮೆಕ್ಯಾನಿಕ್, ಎಲೆಕ್ಟ್ರಿಷಿಯನ್, ಕಾರ್ಪೆಂಟರ್, ಪ್ಲಂಬರ್, ಶೀಟ್ ಮೆಟಲ್ ವರ್ಕರ್, ಟರ್ನರ್ ಮತ್ತು ವೆಲ್ಡರ್ ಹುದ್ದೆಗಳು.

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 18 ಕೊನೆಯ ದಿನವಾಗಿದೆ.

ವಯೋಮಿತಿ ಮತ್ತು ಸಡಿಲಿಕೆ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 28 ವರ್ಷಗಳು ಹಾಗೂ ಎಸ್‌ಸಿ, ಎಸ್‌ಟಿ, ಒಬಿಸಿ, ಇಎಸ್‌ಎಂ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 080-25502520 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿಗೆ ಸಂಪರ್ಕಿಸಬಹುದಾಗಿದೆ. ಅಧಿಕೃತ ವೆಬ್‌ಸೈಟ್ ವಿಳಾಸಗಳು: https://cftri.res.in ಅಥವಾ https://recruitment.cftri.res.in.

Share

Leave a comment

Leave a Reply

Your email address will not be published. Required fields are marked *

Related Articles