ಸೀತಾಫಲ ಎಲೆಗಳಲ್ಲಿ ಹಲವು ಪೋಷಕಾಂಶಗಳಿವೆ ಎನ್ನುತ್ತಾರೆ ಆರೋಗ್ಯ ತಜ್ಞರು. ವಿಟಮಿನ್ ಎ ಜೊತೆಗೆ ವಿಮಿನ್ ಬಿ, ವಿಟಮಿನ್ ಸಿ, ಕಬ್ಬಿಣ, ಫೈಬರ್ ಮತ್ತು ಕ್ಯಾಲ್ಸಿಯಂ ಸಹ ಇದರಲ್ಲಿ ಕಂಡುಬರುತ್ತದೆ.
ಅಲ್ಲದೆ ಇದರಲ್ಲಿ ಅನೇಕ ಆಂಟಿಆಕ್ಸಿಡೆಂಟ್ ಅಂಶಗಳಿದ್ದು, ಇದು ದೇಹದಲ್ಲಿರುವ ಫ್ರೀ ರಾಡಿಕಲ್ ವಿರುದ್ಧ ಹೋರಾಡಿ ದೇಹವನ್ನು ಅನೇಕ ರೋಗಗಳಿಂದ ದೂರವಿಡಲು ಸಹಾಯ ಮಾಡುತ್ತದೆ. ಅಲ್ಲದೆ ಇದು ಉರಿಯೂತ ವಿರೋಧಿ ಗುಣಲಕ್ಷಣಗಳನ್ನು ಹೊಂದಿದ್ದು, ಇದು ದೇಹದಲ್ಲಿನ ಊತ ಮತ್ತು ನೋವಿನಿಂದ ಪರಿಹಾರವನ್ನು ಒದಗಿಸುತ್ತದೆ.