Site icon Kannada News-suddikshana

ಮುಂದಿನ ಒಂದು ವಾರಗಳ ಕಾಲ ಕರ್ನಾಟಕದಾದ್ಯಂತ ಮಳೆ; ಯೆಲ್ಲೋ ಅಲರ್ಟ್

ಬೆಂಗಳೂರು: ಬೆಂಗಳೂರು, ಹಾಸನ, ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೊಷಿಸಲಾಗಿದೆ.

ಮುಂದಿನ ಒಂದು ವಾರಗಳ ಕಾಲ ಕರ್ನಾಟಕದಾದ್ಯಂತ ಮುಂದುವರೆಯಲಿದೆ. ಬೆಂಗಳೂರು, ಹಾಸನ, ಕೊಡಗು ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದಲ್ಲಿ ಮುಂಗಾರುಪೂರ್ವ ಮಳೆಯ ಅಬ್ಬರ ಮುಂದುವರಿದಿದೆ. ಗುರುವಾರ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಮಂಗಳೂರಿನಲ್ಲಿ ಸಿಡಿಲಬ್ಬರದ ಮಳೆಗೆ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಇತ್ತ ಬಂಗಾಳ ಕೊಲ್ಲಿಯಲ್ಲಿ ಈ ವರ್ಷದ ಮುಂಗಾರು ಪೂರ್ವ ಅವಧಿಯ ಮೊದಲ ಚಂಡಮಾರುತ ರೂಪುಗೊಳ್ಳುತ್ತಿದ್ದು, ಇದೇ ಭಾನುವಾರ ಪಶ್ಚಿಮ ಬಂಗಾಳ ಹಾಗೂ ಪಕ್ಕದ ಬಾಂಗ್ಲಾದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದೆ. Ad

Exit mobile version