SUDDIKSHANA KANNADA NEWS/ DAVANAGERE/ DATE:26-11-2024
ದಾವಣಗೆರೆ: ಚನ್ನಗಿರಿ ತಾಲೂಕಿನ ಹಟ್ಟಿ ಗ್ರಾಮದ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಗಾಯಗೊಂಡ ಘಟನೆ ನಡೆದಿದೆ.
ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ಬಸವರಾಜು ವಿ. ಶಿವಗಂಗಾ ಅವರು ಸಿಲಿಂಡರ್ ಸ್ಠೋಟಗೊಂಡ ಸ್ಥಳಕ್ಕೆ ಭೇಟಿ ನಿಡಿದರು. ಕ್ಷೇತ್ರ ಪ್ರವಾಸದಲ್ಲಿದ್ದ ಶಾಸಕರಿಗೆ ಸಿಲಿಂಡರ್ ಸ್ಫೋಟದ ಬಗ್ಗೆ ಮಾಹಿತಿ ಸಿಕ್ಕ ಕೆಲವೇ ಕ್ಷಣಗಳಲ್ಲಿ ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತರನ್ನು ಭೇಟಿ ಮಾಡಿದರು.
ಸಂತ್ರಸ್ತರಾದ ಅಬೀಬ್ ಮತ್ತು ಆಯಾಬ್ ಖಾನ್ ಅವರ ಕುಟುಂಬಕ್ಕೆ ವೈಯುಕ್ತಿಕವಾಗಿ 10 ಸಾವಿರ ರೂಪಾಯಿ ನೀಡುವ ಮೂಲಕ ಆತ್ಮಸ್ಥೈರ್ಯ ತುಂಬಿದರು. ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದರು. ಈ ವೇಳೆ ಉಪವಿಭಾಗಧಿಕಾರಿ ಅಭಿಷೇಕ್ ತಹಶೀಲ್ದಾರ್ ಶಂಕ್ರಪ್ಪ ಹಾಗೂ ಪೊಲೀಸ್ ಅಧಿಕಾರಿಗಳು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.