SUDDIKSHANA KANNADA NEWS/ DAVANAGERE/ DATE:27-10-2023
ದಾವಣಗೆರೆ: ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಅವರು ಎರಡೂವರೆ ವರ್ಷದ ಬಳಿಕ ರಾಜ್ಯದ ಮುಖ್ಯಮಂತ್ರಿಯಾಗುವುದು ಖಚಿತ. ಇದರಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ ಎಂದು ಮಂಡ್ಯ ಕಾಂಗ್ರೆಸ್ ಶಾಸಕ ರವಿಕುಮಾರ ಗಾಣಿಗ ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದರು.
ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕಾಗಿ ಡಿ. ಕೆ. ಶಿವಕುಮಾರ್ ದುಡಿದಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷ ಸಂಘಟಿಸಿ ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಹೈಕಮಾಂಡ್ ನಲ್ಲಿ ಏನು ತೀರ್ಮಾನ ಆಗಿದೆ ಎಂಬುದು ಗೊತ್ತಿಲ್ಲ ಎಂದು ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಸುಮ್ಮನೆ ಬಿಜೆಪಿಯವರು ಇಲ್ಲಸಲ್ಲದ ಹೇಳಿಕೆ ನೀಡಿಕೊಂಡು ಓಡಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರವು ಐದು ಕಲ್ಯಾಣ ಯೋಜನೆಗಳನ್ನು ಕೊಟ್ಟಿದ್ದು, ಜನರಿಗೆ
ತಲುಪಿವೆ ಎಂದು ಹೇಳಿದರು.
ಮಂಡ್ಯದಲ್ಲಿ ಕೈ ಜಯಭೇರಿ:
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ. ಮಂಡ್ಯ ಸಂಸದೆ ಸುಮಲತಾ ಕಾಂಗ್ರೆಸ್ ನಲ್ಲಿಲ್ಲ, ಬಿಜೆಪಿಗೆ ಹೋಗಿದ್ದಾರೆ. ಅಭ್ಯರ್ಥಿ ನಿಲ್ಲಿಸಿ ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸವ್ಯಕ್ತಪಡಿಸಿದರು.