ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆಯನ್ನು ಘೋಷಿಸಿದ್ದಾರೆ. ಆದರೆ ಮಂಗಳೂರು, ಉಳ್ಳಾಲ, ಮೂಡುಬಿದಿರೆ, ಮುಲ್ಕಿ. ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆಯಿಲ್ಲ. ಇಲ್ಲಿ ಎಂದಿನಂತೆ ತರಗತಿಗಳು ನಡೆಯಲಿದೆ ಎಂದು ಡಿಸಿಯವರು ಸ್ಪಷ್ಟವಾಗಿ ತಿಳಿಸಿದ್ದಾರೆ.