Site icon Kannada News-suddikshana

ದಕ್ಷಿಣ ಕನ್ನಡ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ, ಕೋಮುಗಲಭೆಗಳು ನಡೆಯಬಾರದು: ಸಿಎಂ ಸಿದ್ದರಾಮಯ್ಯ

SUDDIKSHANA KANNADA NEWS/ DAVANAGERE/ DATE-16-05-2025

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ ಆಗಲಿದೆ.‌ ಸಚಿವ ಕೃಷ್ಣಬೈರೇಗೌಡರು ವಿಶೇಷ ಕಾಳಜಿ, ಸಾಕಷ್ಟು ಶ್ರಮ ವಹಿಸಿ ಜಿಲ್ಲೆಯನ್ನು ಪೋಡಿಮುಕ್ತ ಮಾಡುವ ದಿಕ್ಕಿನಲ್ಲಿ ಕೆಲಸಗಳು ಆಗಿವೆ ಎಂದು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.‌

ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಪ್ರಜಾಸೌಧ ಕಟ್ಟಡವನ್ನು ಪ್ರಜಾರ್ಪಣೆಗೊಳಿಸಿ ಮಾತನಾಡಿದರು.

ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ. ಮನುಷ್ಯರು ಮನುಷ್ಯರನ್ನು ಪ್ರೀತಿಸುವ ಸರ್ವ ಜನಾಂಗದ ಶಾಂತಿಯ ತೋಟ ನಮ್ಮದು‌. ಈ ಸಮಾಜವನ್ನು ನಾವು ಇನ್ನಷ್ಟು ಗಟ್ಟಿಗೊಳಿಸೋಣ. ಜೊತೆಗೆ ಅಸಮಾನತೆಯ ಸಮಾಜವನ್ನು ಸುಧಾರಿಸಿ ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಸಮಾಜ ಕಟ್ಟೋಣ ಎಂದು ಕರೆ ನೀಡಿದರು.

ಅತ್ಯಂತ ಪ್ರಜ್ಞಾವಂತರೇ ಇರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುಗಲಭೆಗಳು ನಡೆಯಬಾರದು ಎಂದು ಸೂಚಿಸಿದರು.

Exit mobile version