Site icon Kannada News-suddikshana

ದರ್ಶನ್ ಮತ್ತು ಗ್ಯಾಂಗ್‌ಗೆ ಸೆ.12ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ಗೆ ಮತ್ತೆ 3 ದಿನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ತೀರ್ಪು ನೀಡಿದೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾಗುವುದರಲ್ಲಿತ್ತು. ಈ ಹಿನ್ನೆಲೆ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿದೆ. ಈ ವೇಳೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 12ರ ವರೆಗೆ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.

ದರ್ಶನ್ ಅವರು ಬಳ್ಳಾರಿ ಜೈಲಿನಿಂದ, ಪವಿತ್ರಾ ಗೌಡ ಬೆಂಗಳೂರು ಕೇಂದ್ರ ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಮುಂದೆ ಹಾಜರಾದರು. ಅದೇ ರೀತಿ ಈ ಪ್ರಕರಣದಲ್ಲಿ ಬೇರೆ ಬೇರೆ ಜೈಲು ಸೇರಿರುವ ಎಲ್ಲರೂ ವಿಚಾರಣೆಗೆ ಹಾಜರಾಗಿದ್ದಾರೆ. ಇನ್ನು ಸೆಪ್ಟೆಂಬರ್ 12ರಂದು ದರ್ಶನ್ ಸೇರಿ ಎಲ್ಲಾ ಆರೋಪಿಗಳು ಮತ್ತೆ ಕೋರ್ಟ್ ಎದುರು ಹಾಜರಾಗಬೇಕಾಗಿದೆ.

Exit mobile version