Site icon Kannada News-suddikshana

BIG BREAKING: ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪಗೆ ಮಧ್ಯಂತರ ಜಾಮೀನು ಮಂಜೂರು..! ಎಷ್ಟು ದಿನ ಬೇಲ್ ಗೊತ್ತಾ…?

SUDDIKSHANA KANNADA NEWS/ DAVANAGERE/ DATE:30-10-2024

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಜೈಲಿನಲ್ಲಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಕೊಲೆ ಆರೋಪಿ ದರ್ಶನ್ ತೂಗುದೀಪ ಅವರಿಗೆ ಆರೋಗ್ಯದ ನೆಲೆಗಟ್ಟಿನಲ್ಲಿ ಜಾಮೀನು ಮಂಜೂರು ಮಾಡಲಾಗಿದ್ದು, ಇಂದೇ ಜೈಲಿನಿಂದ ಹೊರ ತರಲು ದರ್ಶನ್ ಪರ ವಕೀಲ ಸುನೀಲ್ ಮಾಹಿತಿ ನೀಡಿದ್ದಾರೆ.

ದರ್ಶನ್ ತೂಗುದೀಪ ಅವರಿಗೆ ಪಾಸ್ ಪೋರ್ಟ್ ಸರೆಂಡರ್ ಮಾಡಲು ಸೂಚಿಸಲಾಗಿದ್ದು, ಕೋರ್ಟ್ ಸೂಚಿಸಿರುವ ಎಲ್ಲಾ ಷರತ್ತುಗಳನ್ನು ಪೂರೈಸುತ್ತೇವೆ ಎಂದು ವಕೀಲ ಮಾಹಿತಿ ನೀಡಿದ್ದಾರೆ.

ಒಂದು ವಾರದಲ್ಲಿ ಚಿಕಿತ್ಸೆಯ ಮಾಹಿತಿ ನೀಡುವಂತೆ ಹೈಕೋರ್ಟ್ ಸೂಚಿಸಿದ್ದು, ಆರು ವಾರಗಳ ಕಾಲ ಮಾತ್ರ ಜಾಮೀನು ಮಂಜೂರು ಮಾಡಲಾಗಿದ್ದು, ವೈದ್ಯಕೀಯ ಚಿಕಿತ್ಸೆಗೆ ಒಳಗಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಪೈನಲ್ ಕಾರ್ಡ್ ತೊಂದರೆ ಇರುವುದರಿಂದ ಆಪರೇಷನ್ ಆಗಬೇಕು ಎಂದು ಹೇಳಿದ್ದಾರೆ.

 

Exit mobile version