Site icon Kannada News-suddikshana

ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ: ಆಂತರಿಕ ತನಿಖೆ ನಡೆಸಿ ವರದಿ ನೀಡಿ- ಪರಮೇಶ್ವರ್ ಸೂಚನೆ

ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಆರೋಪಿ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಿದೆ ಎಂಬ ಬಗೆಗಿನ ಫೋಟೋಗಳು ವೈರಲ್ ಆದ ಬೆನ್ನಲ್ಲೇ ಆಂತರಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹಸಚಿವ ಜಿ.ಪರಮೇಶ್ವರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ದರ್ಶನ್ ಅವರು ಜೈಲಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಅವರು ವಿಲ್ಸನ್ ಗಾರ್ಡನ್ ನಾಗ, ಮ್ಯಾನೇಜರ್ ನಾಗರಾಜ್ ಒಟ್ಟಿಗೆ ಕುಳಿತು ಕಾಫಿ ಕುಡಿಯುತ್ತಾ, ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಆಗಿದೆ. ಈ ರಾಜಾತಿಥ್ಯದ ಕುರಿತು ಬಂದಿಖಾನೆ ಡಿಜಿ ಮಾಲಿನಿ ಕೃಷ್ಣಮೂರ್ತಿ ಜೊತೆ ಜಿ.ಪರಮೇಶ್ವರ್ ಅವರು ಕರೆ ಮಾಡಿ ಮಾತನಾಡಿದ್ದಾರೆ.

ದರ್ಶನ್ ಅವರು ಕಾಫಿ ಕುಡಿಯುತ್ತಾ, ಸಿಗರೇಟ್ ಸೇದುತ್ತಾ ಮಾತನಾಡುತ್ತಾ ಕುಳಿತಿರುವ ಫೋಟೋ ವೈರಲ್ ಆದ ಬೆನ್ನಲ್ಲೇ ದರ್ಶನ್ ಅವರು, ಸಹ ಖೈದಿಯ ಮೊಬೈಲ್‌ನಿಂದ ಇತರ ರೌಡಿ ಶೀಟರ್ ಕುಟುಂಬದವರಿಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಜೈಲಿನಲ್ಲಿ ದರ್ಶನ್ ಗೆ ಮೊಬೈಲ್ ಬಳಕೆಗೂ ಅವಕಾಶ ಸಿಗುತ್ತಿದೆಯೇ ಎಂಬ ಪ್ರಶ್ನೆ ಕಾಡುತ್ತಿದೆ.

Exit mobile version