Site icon Kannada News-suddikshana

ಇಂದು ಬಳ್ಳಾರಿ ಸೆಂಟ್ರಲ್ ಜೈಲಿಗೆ ನಟ ದರ್ಶನ್ ಶಿಫ್ಟ್: ಸುತ್ತಮುತ್ತ ಹೈ ಅಲರ್ಟ್!

ಬಳ್ಳಾರಿ: ದರ್ಶನ್ ಮತ್ತು ಅವರ ಗ್ಯಾಂಗ್ ಸದಸ್ಯರನ್ನು ಬಳ್ಳಾರಿ ಸೇರಿ ವಿವಿಧ ಜೈಲುಗಳಿಗೆ ಶಿಫ್ಟ್ ಮಾಡಲು ಸರ್ಕಾರ ಮುಂದಾಗಿದೆ. ಇಂದು ಕೋರ್ಟ್ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿದ ಬಳಿಕ ದರ್ಶನ್&ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿಂದ ಎತ್ತಂಗಡಿ ಆಗಲಿದೆ. ದರ್ಶನ್ ಶಿಫ್ಟ್ ಆಗುವ ಹಿನ್ನೆಲೆ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ಅಧಿಕಾರಿಗಳು ಫುಲ್ ಅಲರ್ಟ್ ಆಗಿದ್ದಾರೆ. ಜೈಲಿನ ಎರಡು ಸಂಪರ್ಕ ರಸ್ತೆಗಳಿಗೆ ಬ್ಯಾರಿಕೇಡ್ ಅಳವಡಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಜೈಲಿನ ಅಧಿಕಾರಿಗಳು ಜಿಲ್ಲಾ ವರಿಷ್ಠಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.

ದರ್ಶನ್ ಅಭಿಮಾನಿಗಳು ಸೇರುವ ಸಾಧ್ಯತೆಯಿರುವ ಹಿನ್ನೆಲೆ ಹೆಚ್ಚಿನ ಸಿಬ್ಬಂದಿ ನಿಯೋಜನೆಗೂ ಯೋಜನೆ ರೂಪಿಸಲಾಗಿದೆ. ಜೈಲಿನ ಸುತ್ತ ಪೊಲೀಸ್ ಸಿಬ್ಬಂದಿ, ಗೃಹ ರಕ್ಷಕ ಸಿಬ್ಬಂದಿ ನಿಯೋಜಸಿಲು ಪ್ಲ್ಯಾನ್ ನಡೆದಿದೆ. ಮತ್ತೊಂದೆಡೆ ಅಂತಿಮ ಹಂತದ ವಿವಿಐಪಿ ಸೆಲ್ ಪರಿಶೀಲನೆ ಹಾಗೂ ಜೈಲಿನ ಸುತ್ತ ಇರುವ ಸಿಸಿ ಕ್ಯಾಮೆರಾಗಳ ವರ್ಕ್ ಕಂಡೀಷನ್ ಪರಿಶೀಲನೆ ಕೂಡ ನಡೆದಿದೆ.‌

Exit mobile version