Site icon Kannada News-suddikshana

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಜಾಮೀನು ಕೋರಿ ಅರ್ಜಿ ಸಲ್ಲಿಸಿದ ನಟ ದರ್ಶನ್

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಕೊನೆಗೂ ಪ್ರಕರಣದ ಎ1 ಆರೋಪಿ ಪವಿತ್ರಾ ಸೇರಿದಂತೆ ಇನ್ನು ಕೆಲ ಆರೋಪಿಗಳು, ಈಗಾಗಲೇ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಅರ್ಜಿಗಳು ತಿರಸ್ಕೃತಗೊಂಡಿವೆ.

ಆದರೆ ದರ್ಶನ್ ಮಾತ್ರ ಇಲ್ಲಿಯವರೆಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿರಲಿಲ್ಲ. ಇದೀಗ ಅವರೂ ಕೂಡ ಜಾಮೀನು ಕೋರಿ ಅರ್ಜಿ ಸಲ್ಲಿಸಿರುತ್ತಾರೆ.

ದರ್ಶನ್ ಅವರು ತಮ್ಮ ವಕೀಲರ ಕಡೆಯಿಂದ ಬೆಂಗಳೂರಿನ ಸೆಷನ್ಸ್ ಕೋರ್ಟ್‌ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇನ್ನು ಇಂದೇ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ. ಹಾಗೂ ಜಾಮೀನು ಅರ್ಜಿ ವಿಚಾರಣೆ ಮುಂದೂಡುವ ಸಂಭವವಿದೆ ಎನ್ನಲಾಗಿದೆ.

 

Exit mobile version