Site icon Kannada News-suddikshana

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಸೇರಿ ಎಲ್ಲ ಆರೋಪಿಗಳಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಹಲವರು ಜೈಲುಪಾಲಾಗಿದ್ದಾರೆ. ಇಂತಹ ನಟ ದರ್ಶನ್ ಅಂಡ್ ಗ್ಯಾಂಗ್ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ.

ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವಂತ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಕೊನೆಗೊಂಡಿತ್ತು. ಹೀಗಾಗಿ ಎಸ್ಐಟಿ ಪೊಲೀಸರು ಕೋರ್ಟ್ ಗೆ ಆರೋಪಿಗಳ ಮಾಹಿತಿ ಸಲ್ಲಿಕೆ ಮಾಡಿದ್ದರು.

ಈ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ನ ನ್ಯಾಯಾಧೀಶರು ನಟ ದರ್ಶನ್ ಅಂಡ್ ಗ್ಯಾಂಗ್ ಗೆ ನ್ಯಾಯಾಂಗ ಬಂಧನದ ಅಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಿ ಆದೇಶಿಸಿದೆ. ಅಂದರೇ ಆಗಸ್ಟ್.1ರವರೆಗೆ ನ್ಯಾಯಾಂಗ ಬಂಧವನ್ನು ವಿಸ್ತರಿಸಿ ಆದೇಶಿಸಿದೆ.

Exit mobile version