SUDDIKSHANA KANNADA NEWS/ DAVANAGERE/ DATE:19-02-2025
ಬೆಂಗಳೂರು: ಕೊಲೆ ಪ್ರಕರಣ ಸಂಬಂಧ ಅರೆಸ್ಟ್ ಆಗಿ ಜಾಮೀನಿನ ಮೇಲೆ ಹೊರಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಮೌನ ಮುರಿದಿದ್ದಾರೆ. ಎರಡನೇ ಬಾರಿ ಫ್ಯಾನ್ಸ್ ಗೆ ಸಂದೇಶ ಕೊಟ್ಟಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಆರೋಪಿಗಳಿಗೆ ಜಾಮೀನು ರದ್ದುಕೋರಿ ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್ ನಲ್ಲಿ ಆಕ್ಷೇಪಣೆ ಸಲ್ಲಿಸಿದ್ದಾರೆ. ಈ ನಡುವೆ ದರ್ಶನ್ ತೂಗುದೀಪ ಜನುಮದಿನಾಚರಣೆಯೂ ಮುಗಿದಿದೆ. ಈ ಮಧ್ಯೆ ಮೌನ ಮುರಿದಿರುವ ದರ್ಶನ್ ತೂಗುದೀಪ ಅವರು ಪ್ರೀತಿ ಸೆಲೆಬ್ರಿಟಿಸ್ ಗಳಿಗೆ ಮೆಸೇಜ್ ನೀಡಿದ್ದಾರೆ. ತೋರಿದ ಪ್ರೀತಿಗೆ ಧನ್ಯವಾದ ಅರ್ಪಿಸಿದ್ದಾರೆ.
ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ ಎಂದು ದರ್ಶನ್ ಭಾವುಕ ಪೋಸ್ಟ್ ಮಾಡಿದ್ದಾರೆ.
ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿದೀಪವಾಗಲಿ ಎಂದು ಶುಭ ಹಾರೈಸಿದ್ದಾರೆ.
ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ. ನಿಮ್ಮ
ದಾಸ ದರ್ಶನ್ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.