SUDDIKSHANA KANNADA NEWS/ DAVANAGERE/DATE:14_08_2025
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಈ ಮೂಲಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ, ಪವಿತ್ರಾ ಗೌಡ ಮತ್ತೆ ಜೈಲಿಗೆ ಹೋಗಬೇಕಾಗಿದೆ.
ಈ ಸುದ್ದಿಯನ್ನೂ ಓದಿ: ಕೂಲಿ ಸಿನಿಮಾಕ್ಕೆ ಭರ್ಜರಿ ಓಪನಿಂಗ್: ಆರಂಭದಿಂದ ಅಂತ್ಯದವರೆಗೂ ರಜನಿಕಾಂತ್ ‘ಸುನಾಮಿ’!
ಸುಪ್ರೀಂಕೋರ್ಟ್ ಶಾಕ್ ನೀಡಿದ್ದು, ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ಮತ್ತೆ ಜೈಲಿಗೆ ಹೋಗಬೇಕಾಗಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಪಡಿಸುವ ಮೂಲಕ ಕೊಲೆ ಆರೋಪಿಗಳಿಗೆ ಬಹಳ ದೊಡ್ಡ ಶಾಕ್ ಆದಂತಾಗಿದೆ.
ಕರ್ನಾಟಕ ಮಾತ್ರವಲ್ಲ, ದೇಶದ ಗಮನ ಸೆಳೆದಿದ್ದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶ ರದ್ದುಪಡಿಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ದೊಡ್ಡ ಸಂದೇಶ ರವಾನಿಸಿದ್ದಾರೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಹೇಳಿದೆ.
ದರ್ಶನ್ ತೂಗುದೀಪ ಅವರಿಗೆ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಕರ್ನಾಟಕ ಪೊಲೀಸರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಮಾತ್ರವಲ್ಲ, ಜೈಲಿನಲ್ಲಿ ರಾಜಾತಿಥ್ಯ ನೀಡಿದ್ದ ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವಂತೆಯೂ
ಆದೇಶಿಸಿದೆ.