SUDDIKSHANA KANNADA NEWS/ DAVANAGERE/ DATE:30-10-2024
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರ ಮೊಗದಲ್ಲಿ ಮಂದಹಾಸ ಮೂಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಜೈಲಿನಲ್ಲಿ ಬಂಧಿಯಾಗಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರು ಖುಷಿಯಾಗಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಜೈಲಿನಲ್ಲಿ ರಾಜಾತಿಥ್ಯ ಸಿಕ್ಕ ಹಿನ್ನೆಲೆಯಲ್ಲಿ ಬಳ್ಳಾರಿ ಸೆಂಟ್ರಲ್ ಜೈಲಿಗೆ ದರ್ಶನ್ ತೂಗುದೀಪ ಅವರನ್ನು ಸ್ಥಳಾಂತರಿಸಲಾಗಿತ್ತು. ಬೆನ್ನು ನೋವು, ಸ್ಪೈನಲ್ ಕಾರ್ಡ್ ಆಪರೇಷನ್ ಗೆ ಮಾತ್ರ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಜಾಮೀನು ಮಂಜೂರಾಗಿಲ್ಲ. ಇನ್ನು ದರ್ಶನ್ ತೂಗುದೀಪ ಅವರಿಗೆ ಜೈಲಿನ ಸಿಬ್ಬಂದಿ ಮಧ್ಯಂತರ ಜಾಮೀನು ಸಿಕ್ಕ ಕುರಿತಂತೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಖುಷಿ ವ್ಯಕ್ತಪಡಿಸಿದ ದರ್ಶನ್ ತೂಗುದೀಪ ಅವರು, ಜೈಲಿನ ಸಿಬ್ಬಂದಿ ಹಾಗೂ ಖೈದಿಗಳತ್ತ ಕೈ ಬೀಸಿದರು. ಮಾತ್ರವಲ್ಲ, ದರ್ಶನ್ ತೂಗುದೀಪ ಅವರಿಗೆ ಜಾಮೀನು ಸಿಗುತ್ತಿದ್ದಂತೆ ಅಭಿಮಾನಿಗಳು ಖುಷಿಯಾಗಿದ್ದಾರೆ. ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ. ಮಾತ್ರವಲ್ಲ, ಬೇರೆ ಬೇರೆ ಜಿಲ್ಲೆಗಳಲ್ಲಿ ನಮ್ಮ ಡಿ ಬಾಸ್ ಹೊರ ಬರುತ್ತಿರುವುದು ಸಂತೋಷದ ದಿನ. ದೀಪಾವಳಿ ಹಬ್ಬ ವಿಜೃಂಭಣೆಯಿಂದ ಆಚರಿಸಬಹುದು ಎಂದು ಕಾಟೇರ ಫ್ಯಾನ್ಸ್ ಹೇಳುತ್ತಿದ್ದಾರೆ.