SUDDIKSHANA KANNADA NEWS/ DAVANAGERE/ DATE:30-10-2024
ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಯ ವಿವಿಧ ಕೋರ್ಸ್ಗಳಲ್ಲಿ ಖಾಲಿ ಇರುವ ಸೀಟುಗಳ ಭರ್ತಿಗಾಗಿ ಪ್ರವೇಶಾವಕಾಶ ಅವಧಿಯನ್ನು ನವೆಂಬರ್ 11ರವರೆಗೆ ವಿಸ್ತರಿಸಲಾಗಿದೆ.
ಸ್ನಾತಕೋತ್ತರ ಪದವಿಯ ವಿಜ್ಞಾನ, ಶಿಕ್ಷಣ, ಸಮಾಜ ವಿಜ್ಞಾನ ಮತ್ತು ವಾಣಿಜ್ಯ ನಿಕಾಯಗಳ ಎಲ್ಲ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಅವಕಾಶವಿದ್ದು, ಆಸಕ್ತ ವಿದ್ಯಾರ್ಥಿಗಳು ನವೆಂಬರ್ 4ರಿಂದ 11ರವರೆಗೆ ಅರ್ಜಿ ಸಲ್ಲಿಸಬಹುದು. ನವೆಂಬರ್ 14 ಮತ್ತು 15ರಂದು ಪ್ರವೇಶ ಪ್ರಕ್ರಿಯೆ ನಡೆಯಲಿದೆ ಎಂದು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ.ಯು.ಎಸ್.ಮಹಾಬಲೇಶ್ವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.