SUDDIKSHANA KANNADA NEWS/ DAVANAGERE/ DATE:20-11-2023
ದಾವಣಗೆರೆ: ಪ್ರಸಕ್ತ ಸಾಲಿನ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 15 ರ ವರೆಗೆ ಅವಧಿ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂ.08192-263936, ವಿಕಲಚೇತನರ ಸಹಾಯವಾಣಿ 08192-263939ಗೆ ಸಂಪರ್ಕಿಸಬಹುದೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಕೆ.ಕೆ. ಪ್ರಕಾಶ್
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2022-23ನೇ ಸಾಲಿನ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಅರ್ಜಿ ಆಹ್ವಾನ:
ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಪ್ರಸಕ್ತ ಸಾಲಿನ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಉತ್ತಮ ಪುಸ್ತಕಗಳನ್ನು ರಚಿಸಿದ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಸಾಲಿನ ಅವಧಿಯಲ್ಲಿ ಪ್ರಕಟಣೆಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ಪಠ್ಯಾಧಾರಿತ ಹೊರತುಪಡಿಸಿ ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಕವನ ಸಂಕಲನ, ಅನಿವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ) ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ ಒಟ್ಟಾರೆಯಾಗಿ 7 ಪ್ರಕಾರದ ಮಕ್ಕಳ ಸಾಹಿತ್ಯ ಕೃತಿಯನ್ನು ಪ್ರಶಸ್ತಿಗಾಗಿ ಆಹ್ವಾನಿಸಲಾಗಿದ್ದು, ಪುಸ್ತಕಗಳ 4 ಪ್ರತಿಗಳು ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಅಕಾಡೆಮಿ ಕೇಂದ್ರ ಕಚೇರಿ ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿಸೆಂಬರ್ 4 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇ ಔಟ್ ಹಿಂಬಾಗ, ಕೆ.ಹೆಚ್.ಬಿ ಕಾಲೋನಿ, ಲಕಮನಹಳ್ಳಿ, ಧಾರವಾಡ ದೂ.ಸಂ. 0836 2461666 ಗೆ ಸಂಪರ್ಕಿಸಲು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ್ ತಿಳಿಸಿದ್ದಾರೆ.