Home ದಾವಣಗೆರೆ ದಾವಣಗೆರೆ: ಅಲೆಮಾರಿ ಅಭಿವೃದ್ಧಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನ, ಜೂನ್ 12 ಕೊನೆಯ ದಿನ!
ದಾವಣಗೆರೆಬೆಂಗಳೂರು

ದಾವಣಗೆರೆ: ಅಲೆಮಾರಿ ಅಭಿವೃದ್ಧಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನ, ಜೂನ್ 12 ಕೊನೆಯ ದಿನ!

Share
ದಾವಣಗೆರೆ
Share

ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ವಸತಿ ಯೋಜನೆಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಚನ್ನಗಿರಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಅರ್ಹ ಅಭ್ಯರ್ಥಿಗಳು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಜೂನ್ 12 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಈ ಯೋಜನೆಯಡಿ ವಸತಿ ಸೌಲಭ್ಯ ಪಡೆಯಲು ಬಯಸುವ ಆಸಕ್ತರು ನಿಗದಿತ ಅರ್ಜಿ ನಮೂನೆ, ಅಗತ್ಯ ದಾಖಲಾತಿಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1 ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಇಲ್ಲಿಗೆ ಖುದ್ದಾಗಿ ಭೇಟಿ ನೀಡಿ ಸಂಪರ್ಕಿಸಬಹುದಾಗಿದೆ. ಕೊನೆಯ ದಿನಾಂಕ ಹತ್ತಿರವಿರುವುದರಿಂದ ತಕ್ಷಣವೇ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles