Home ದಾವಣಗೆರೆ ಜಿಲ್ಲೆಯ ಮಹಿಳೆಯರಿಗೆ ಉದ್ಯೋಗಾವಕಾಶದ ಸುವರ್ಣಾವಕಾಶ: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನ!
Homeಉದ್ಯೋಗ ವಾರ್ತೆದಾವಣಗೆರೆಬೆಂಗಳೂರು

ದಾವಣಗೆರೆ ಜಿಲ್ಲೆಯ ಮಹಿಳೆಯರಿಗೆ ಉದ್ಯೋಗಾವಕಾಶದ ಸುವರ್ಣಾವಕಾಶ: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನ!

Share
ದಾವಣಗೆರೆ
Share

ದಾವಣಗೆರೆ: ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ದಾವಣಗೆರೆ, ಜಗಳೂರು, ಹರಿಹರ, ಚನ್ನಗಿರಿ, ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 22 ಅಂಗನವಾಡಿ ಕಾರ್ಯಕರ್ತೆಹಾಗೂ 183 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್  ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನವಾಗಿರುತ್ತದೆ .ಆಸಕ್ತ ಅಭ್ಯರ್ಥಿಗಳು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದು, ಸಂಬಂಧಿತ ದಾಖಲೆಗಳೊಂದಿಗೆ ಮುಚ್ಚಿದ ಲಕೋಟೆಯಲ್ಲಿ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ಕಛೇರಿಯಲ್ಲಿನ ಟೆಂಡರ್ ಬಾಕ್ಸ್ ನಲ್ಲಿ ಖುದ್ದಾಗಿ ಅರ್ಜಿ ಸಲ್ಲಿಸಬೇಕು.

ಹುದ್ದೆಗಳ ವಿವರ

ಅಂಗನವಾಡಿ ಕಾರ್ಯಕರ್ತೆ: 22 ಹುದ್ದೆಗಳು

ಅಂಗನವಾಡಿ ಸಹಾಯಕಿ: 183 ಹುದ್ದೆಗಳು

ಒಟ್ಟು ಹುದ್ದೆಗಳು: 205

ಅರ್ಜಿ ಸಲ್ಲಿಸುವ ವಿಧಾನ

ಅರ್ಜಿ ಪಡೆಯುವುದು: ಆಸಕ್ತ ಅಭ್ಯರ್ಥಿಗಳು ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ (CDPO) ಕಛೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆಯಬೇಕು.

ಸಲ್ಲಿಕೆ ವಿಧಾನ: ಭರ್ತಿ ಮಾಡಿದ ಅರ್ಜಿ ಮತ್ತು ಅಗತ್ಯ ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ (Envelope) ಹಾಕಿ, ಆಯಾ ತಾಲ್ಲೂಕಿನ ಕಛೇರಿಯಲ್ಲಿ ಇಡಲಾಗಿರುವ ಟೆಂಡರ್ ಬಾಕ್ಸ್‌ನಲ್ಲಿ ಖುದ್ದಾಗಿ ಸಲ್ಲಿಸಬೇಕು.

ಕೊನೆಯ ದಿನಾಂಕ: ಜುಲೈ 22

ಹೆಚ್ಚಿನ ವಿವರಗಳಿಗೆ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಕಛೇರಿಯ ದೂ.ಸಂ: ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ದಾವಣಗೆರೆ.   ದೂ.ಸಂ:08192-263219, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಹರಿಹರ.  ದೂ.ಸಂ:08192-241431, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಜಗಳೂರು.   ದೂ.ಸಂ:08196-227132, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಚನ್ನಗಿರಿ.ದೂ.ಸಂ:08189-295455, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಹೊನ್ನಾಳಿ ಮತ್ತು ನ್ಯಾಮತಿ  ದೂ.ಸಂ:08188-251283 ಸಂಪರ್ಕಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *