Home ಉದ್ಯೋಗ ವಾರ್ತೆ ಹರಿಹರ ಮತ್ತು ಚನ್ನಗಿರಿಯಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳ ಭರ್ತಿ; ಜುಲೈ ಒಳಗೆ ಅರ್ಜಿ ಸಲ್ಲಿಸಿ.
ಉದ್ಯೋಗ ವಾರ್ತೆದಾವಣಗೆರೆಬೆಂಗಳೂರು

ಹರಿಹರ ಮತ್ತು ಚನ್ನಗಿರಿಯಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳ ಭರ್ತಿ; ಜುಲೈ ಒಳಗೆ ಅರ್ಜಿ ಸಲ್ಲಿಸಿ.

Share
ಹರಿಹರ
Share

ದಾವಣಗೆರೆ: ಜಿಲ್ಲೆಯ ಹರಿಹರ ಹಾಗೂ ಚನ್ನಗಿರಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಗೌರವ ಸೇವೆ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹರಿಹರ ತಾಲೂಕು ವಿವರ:

ಹರಿಹರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಒಟ್ಟು 5 ಅಂಗನವಾಡಿ ಕಾರ್ಯಕರ್ತೆ ಹಾಗೂ ಕ್ರಷ್ ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇವೆ. ಆಸಕ್ತರು ತಮ್ಮ ಅರ್ಜಿಗಳನ್ನು ಜುಲೈ 28ರೊಳಗಾಗಿ ‘ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಎಂ.ಸಿ.ಸಿ ಬಿ ಬ್ಲಾಕ್, 14ನೇ ಮುಖ್ಯರಸ್ತೆ, ಕುವೆಂಪು ನಗರ, ಬಾಲಕರ ಬಾಲಮಂದಿರ ಆವರಣ, ದಾವಣಗೆರೆ’ ಈ ವಿಳಾಸಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08192-264056 ಸಂಪರ್ಕಿಸಬಹುದು.

ಚನ್ನಗಿರಿ ತಾಲೂಕು ವಿವರ:

ಚನ್ನಗಿರಿ ತಾಲೂಕಿನಲ್ಲಿ ಒಟ್ಟು 12 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 55 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇವೆ. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಚನ್ನಗಿರಿ ಶಿಶು ಅಭಿವೃದ್ಧಿ ಯೋಜನಾ ಕಚೇರಿಯಿಂದಲೇ ಪಡೆದುಕೊಂಡು, ಅಗತ್ಯ ದಾಖಲೆಗಳೊಂದಿಗೆ ಜುಲೈ 22ರೊಳಗಾಗಿ ಸಲ್ಲಿಸಬೇಕಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ‘ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಜಿ.ಎಂ ಕಾಂಪ್ಲೆಕ್ಸ್, ಐ.ಸಿ.ಐ.ಸಿ.ಐ ಬ್ಯಾಂಕ್ ಹಿಂಭಾಗ, ಚನ್ನಗಿರಿ’ ಇಲ್ಲಿಗೆ ಭೇಟಿ ನೀಡಬಹುದು ಅಥವಾ ದೂ: 08189-295455 ಕರೆ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.

Share

Leave a comment

Leave a Reply

Your email address will not be published. Required fields are marked *

Related Articles