Home ಕ್ರೈಂ ನ್ಯೂಸ್ ದಾವಣಗೆರೆಯ ಆಜಾದ್ ನಗರ ಪೊಲೀಸರ ಭರ್ಜರಿ ಬೇಟೆ: ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಹುಬ್ಬಳ್ಳಿಯಲ್ಲಿ ಅರೆಸ್ಟ್!
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

ದಾವಣಗೆರೆಯ ಆಜಾದ್ ನಗರ ಪೊಲೀಸರ ಭರ್ಜರಿ ಬೇಟೆ: ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಹುಬ್ಬಳ್ಳಿಯಲ್ಲಿ ಅರೆಸ್ಟ್!

Share
ದಾವಣಗೆರೆ
Share

ದಾವಣಗೆರೆ: ದಾವಣಗೆರೆ ನಗರದ ಆಜಾದ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಪೊಲೀಸರು ಹುಬ್ಬಳ್ಳಿಯಲ್ಲಿ ಯಶಸ್ವಿಯಾಗಿ ಬಂಧಿಸಿದ್ದಾರೆ.

2026ರ ಸೆಪ್ಟೆಂಬರ್ 06 ರಂದು ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ (ಗುನ್ನೆ ನಂ. 133/2026) ಪ್ರಕರಣ ದಾಖಲಾಗಿತ್ತು. ಈ ಹಿಂದೆ ಈ ಪ್ರಕರಣದಲ್ಲಿ 6 ಜನ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಗಾಗಿ ಪೊಲೀಸರ ಹುಡುಕಾಟ ಮುಂದುವರೆದಿತ್ತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಎಚ್.ಟಿ. ಅವರ ನಿರ್ದೇಶನ, ಹೆಚ್ಚುವರಿ ಎಸ್‌ಪಿ ಪರಮೇಶ್ವರ ಹೆಗಡೆ ಹಾಗೂ ಡಿವೈಎಸ್ಪಿ  ಶರಣ ಬಸವೇಶ್ವರ ಬಿ. ಅವರ ಮಾರ್ಗದರ್ಶನದಲ್ಲಿ, ಆಜಾದ್ ನಗರ ಠಾಣೆಯ ಇನ್‌ಸ್ಪೆಕ್ಟರ್ ಸುರೇಶ್ ಯಳ್ಳೂರ್ ನೇತೃತ್ವದ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿದೆ.

ದಾವಣಗೆರೆಯ ಆರೋಪಿ ಅಮಾನ್ ಯಾನೆ ಅಮಾನುಲ್ಲಾ (50 ವರ್ಷ) ಎಂಬಾತನು ಹುಬ್ಬಳ್ಳಿ ನಗರದ ಇಸ್ಲಾಂಪುರ ಬಳಿ ತಲೆಮರೆಸಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ತಕ್ಷಣ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪ್ರಕರಣದ ವಿವರ: ಎರಡು ಗುಂಪುಗಳ ನಡುವಿನ ಗಲಾಟೆ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಜಾದ್ ನಗರ ಠಾಣೆಯಲ್ಲಿ ದಾಖಲಾದ ದೂರು (ಕ್ರೈಮ್ ನಂ. 133/2026).

ಬಂಧಿತ ಆರೋಪಿ: ಅಮಾನ್ ಯಾನೆ ಅಮಾನುಲ್ಲಾ (50 ವರ್ಷ), ದಾವಣಗೆರೆ ನಿವಾಸಿ. ಹುಬ್ಬಳ್ಳಿಯ ಇಸ್ಲಾಂಪುರದಲ್ಲಿ ತಲೆಮರೆಸಿಕೊಂಡಿದ್ದಾಗ ಬಂಧನ.

ಕಾರ್ಯಾಚರಣೆ ತಂಡ: ಆಜಾದ್ ನಗರ ಇನ್‌ಸ್ಪೆಕ್ಟರ್ ಸುರೇಶ್ ಯಳ್ಳೂರು, ಪಿಎಸ್‌ಐ ಮಂಜುಳ, ಎಎಸ್‌ಐ ಲೋಕನಾಯ್ಕ್ ಹಾಗೂ ಸಿಬ್ಬಂದಿ ವರ್ಗ.

ಎಸ್ಪಿ ಪ್ರಶಂಸೆ: ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಹಚ್ಚಿ ಯಶಸ್ವಿಯಾಗಿ ಬಂಧಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯವೈಖರಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಎಚ್.ಟಿ. ಅವರು ಪ್ರಶಂಸಿಸಿದ್ದಾರೆ.

ಈ ಪ್ರಕರಣದಲ್ಲಿ ಉಳಿದ ತಲೆಮರೆಸಿಕೊಂಡಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರ ಶೋಧ ಕಾರ್ಯ ಮುಂದುವರಿದಿದೆ.

Share

Leave a comment

Leave a Reply

Your email address will not be published. Required fields are marked *

Related Articles