Home ದಾವಣಗೆರೆ ದಾವಣಗೆರೆಯ ಬಾತಿ ಜಲ ಶುದ್ಧೀಕರಣ ಘಟಕದಲ್ಲಿ ಪೈಪ್‌ಲೈನ್ ದುರಸ್ತಿ: ನವೆಂಬರ್ 16ರಿಂದ 20ರವರೆಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ
ದಾವಣಗೆರೆಬೆಂಗಳೂರು

ದಾವಣಗೆರೆಯ ಬಾತಿ ಜಲ ಶುದ್ಧೀಕರಣ ಘಟಕದಲ್ಲಿ ಪೈಪ್‌ಲೈನ್ ದುರಸ್ತಿ: ನವೆಂಬರ್ 16ರಿಂದ 20ರವರೆಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ

Share
ದಾವಣಗೆರೆ
Share

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವತಿಯಿಂದ ಬಾತಿ ನೀರು ಶುದ್ಧೀಕರಣ ಘಟಕದಲ್ಲಿ ಶುದ್ಧ ಕುಡಿಯುವ ನೀರಿನ ಪೈಪ್‌ಲೈನ್ ದುರಸ್ಥಿ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ 16 ರಿಂದ 20 ರವರೆಗೆ ದಾವಣಗೆರೆ ನಗರಕ್ಕೆ ಸರಬರಾಜಾಗುವ ಕುಡಿಯುವ ನೀರಿನ ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರು ಈ ಅವಧಿಯಲ್ಲಿ ಪಾಲಿಕೆಯೊಂದಿಗೆ ಸಹಕರಿಸುವಂತೆ ಹಾಗೂ ನೀರನ್ನು ವ್ಯರ್ಥ ಮಾಡದೆ ಮಿತವಾಗಿ ಬಳಸಿ, ಮುಂಚಿತವಾಗಿ ಸಂಗ್ರಹಿಸಿಟ್ಟುಕೊಳ್ಳುವಂತೆ ಮನವಿ ಮಾಡಲಾಗಿದೆ. ಜೊತೆಗೆ, ಆರೋಗ್ಯದ ದೃಷ್ಟಿಯಿಂದ ಕಡ್ಡಾಯವಾಗಿ ಕುದಿಸಿ ಆರಿಸಿದ ನೀರನ್ನು ಕುಡಿಯುವಂತೆ ಸೂಚಿಸಲಾಗಿದೆ.

ಕಾರಣ: ಬಾತಿ ನೀರು ಶುದ್ಧೀಕರಣ ಘಟಕದಲ್ಲಿ ಶುದ್ಧ ಕುಡಿಯುವ ನೀರಿನ ಪೈಪ್‌ಲೈನ್ ದುರಸ್ಥಿ ಕಾರ್ಯ.

ನೀರು ಸರಬರಾಜು ವ್ಯತ್ಯಯ ದಿನಗಳು: ನವೆಂಬರ್ 16 ರಿಂದ 20 ರವರೆಗೆ.

ಸಾರ್ವಜನಿಕರಿಗೆ ಸೂಚನೆಗಳು: ನೀರನ್ನು ಮಿತವಾಗಿ ಬಳಸಿ ಸಂಗ್ರಹಿಸಿಟ್ಟುಕೊಳ್ಳುವುದು ಹಾಗೂ ಕಡ್ಡಾಯವಾಗಿ ಕುದಿಸಿ ಆರಿಸಿದ ನೀರನ್ನು ಮಾತ್ರ ಕುಡಿಯುವುದು.

Share

Leave a comment

Leave a Reply

Your email address will not be published. Required fields are marked *

Related Articles