SUDDIKSHANA KANNADA NEWS| DAVANAGERE| DATE:28-04-2023
ದಾವಣಗೆರೆ (DAVANAGERE) ಅಖಿಲ ಭಾರತ ಕಾಂಗ್ರೆಸ್ (CONGRESS) ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ (MODI) ಅವರ ಬಗ್ಗೆ ಮಾಡಿರುವ ಅವಹೇಳನಕಾರಿ ಟೀಕೆಯನ್ನು ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಾರ್ಟಿ ಖಂಡಿಸಿದೆ.
ಅತ್ಯಂತ ಕೀಳುಮಟ್ಟದ ಟೀಕೆ ಕಾಂಗ್ರೆಸ್ (CONGRESS) ಪಕ್ಷದ ಸಂಸ್ಕೃತಿಯನ್ನು ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ವ್ಯಕ್ತಿತ್ವವನ್ನು ಪ್ರತಿಬಿಂಬಿಸುತ್ತದೆ. ಸೈದ್ಧಾಂತಿಕ ಭಿನ್ನಾಭಿಪ್ರಾಯಕ್ಕೆ ವಿರೋಧ ವ್ಯಕ್ತಪಡಿಸುವುದು ಪ್ರಜಾಪ್ರಭುತ್ವದಲ್ಲಿ ರಾಜಕಾರಣದಲ್ಲಿ ಸಹಜ. ಆದರೆ ವೈಯಕ್ತಿಕವಾಗಿ ಒಬ್ಬ ವ್ಯಕ್ತಿಯನ್ನು ತೇಜೋವುಧೆ ಮಾಡುವ ಕೀಳುಮಟ್ಟದ ಟೀಕೆ ಅತ್ಯಂತ ಖಂಡನೀಯ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಕೂಡಲೇ ಪ್ರಧಾನಿ ನರೇಂದ್ರ ಮೋದಿಯವರ ಬೇಷರತ್ ಕ್ಷಮೆ ಕೇಳಬೇಕೆಂದು ಭಾರತೀಯ ಜನತಾ ಪಾರ್ಟಿ ದಾವಣಗೆರೆ ಜಿಲ್ಲಾ ಘಟಕ ಒತ್ತಾಯಿಸಿದೆ.
ಈ ಹಿಂದೆ ಸೋನಿಯಾ ಗಾಂಧಿಯವರು ಪ್ರಧಾನಿಯವರನ್ನು ಸಾವಿನ ವ್ಯಾಪಾರಿ ಎಂದು ಟೀಕೆ ಮಾಡಿದ್ದರು. ಇದೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಗುಜರಾತ್ ಚುನಾವಣಾ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ನೂರು ತಲೆ ಉಳ್ಳ ರಾವಣನೆಂದು ಜರಿದಿದ್ದರು. ಕಾಂಗ್ರೆಸ್ ಪಕ್ಷದ ಮುಖಂಡ ಮಣಿ ಶಂಕರ್ ಅಯ್ಯರ್ ಅವರು ಪ್ರಧಾನಿ ಮೋದಿ ಅವರನ್ನು ಚಾಯ್ ವಾಲಾ ಎಂದು ಜರೆದಿದ್ದರು. ವಿರೋಧ ಪಕ್ಷದವರು ಪ್ರಧಾನಿ ಮೋದಿ ಅವರ ಬಗ್ಗೆ ಎಷ್ಟೇ ಟೀಕೆ ಮಾಡಿದರೂ ಪ್ರಧಾನಿ ಮೋದಿ ಅವರ ಜನಪ್ರಿಯತೆ ಉತ್ತುಂಗಕ್ಕೆ ಏರುತ್ತಿದೆ. ಇಂದು ಪ್ರಧಾನಿ ಮೋದಿ ಅವರು ವಿಶ್ವವೇ ಮಾನ್ಯ ಮಾಡುವ ವಿಶ್ವ ನಾಯಕರಾಗಿದ್ದಾರೆ.
ಇನ್ನಾದರೂ ಕಾಂಗ್ರೆಸ್ ಪಕ್ಷದ ಮುಖಂಡರು ಪ್ರಧಾನಿಗಳ ಬಗ್ಗೆ ಗೌರವದಿಂದ ಮಾತನಾಡುವುದನ್ನು ಕಲಿಯಲಿ ಎಂದು ಬಿಜೆಪಿ ಒತ್ತಾಯಿಸುತ್ತದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಡಿ. ಎಸ್. ಶಿವಶಂಕರ್ ಹೇಳಿದ್ದಾರೆ.