Home ದಾವಣಗೆರೆ ಜನಾಕ್ರೋಶಕ್ಕೆ ಹೆದರಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡುತ್ತಿರುವ ಕಾಂಗ್ರೆಸ್ ಸರ್ಕಾರ: ರಾಜನಹಳ್ಳಿ ಶಿವಕುಮಾರ್
ದಾವಣಗೆರೆನವದೆಹಲಿಬೆಂಗಳೂರು

ಜನಾಕ್ರೋಶಕ್ಕೆ ಹೆದರಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡುತ್ತಿರುವ ಕಾಂಗ್ರೆಸ್ ಸರ್ಕಾರ: ರಾಜನಹಳ್ಳಿ ಶಿವಕುಮಾರ್

Share
ಚುನಾವಣೆ
Share

ದಾವಣಗೆರೆ: ಆಡಳಿತ ವೈಫಲ್ಯ, ಸಚಿವ ಸಂಪುಟ ವಿಸ್ತರಣೆ ಗೊಂದಲ, ಮುಖ್ಯಮಂತ್ರಿ ಬದಲಾವಣೆ ಸೇರಿದಂತೆ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಬಗ್ಗೆ ಜನರು ಬೇಸತ್ತು ಹೋಗಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ ನೆಪವೊಡ್ಡಿ ಚುನಾವಣೆಗಳನ್ನು ಮುಂದೂಡುತ್ತಿರುವುದೇ ಇದಕ್ಕೆ ಸಾಕ್ಷಿ ಎಂದು ದೂಡಾ ಮಾಜಿ ಅಧ್ಯಕ್ಷರೂ ಆದ ಬಿಜೆಪಿ ಹಿರಿಯ ಮುಖಂಡ ರಾಜನಹಳ್ಳಿ ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳದ್ದೇ ದರ್ಬಾರ್, ಜನಸಾಮಾನ್ಯರಿಗೆ ಸಂಕಷ್ಟ

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಮಹಾನಗರ ಪಾಲಿಕೆ, ಬಿಬಿಎಂಪಿ ಪಾಲಿಕೆ ಚುನಾವಣೆಗಳನ್ನು ಮುಂದೂಡುತ್ತಿರುವ ರಾಜ್ಯ ಸರ್ಕಾರವು ಸಮರ್ಥ ಆಡಳಿತ ನೀಡುವಲ್ಲಿ ವಿಫಲವಾಗಿದೆ. ಕಾಂಗ್ರೆಸ್ ಭ್ರಷ್ಟಾಚಾರಕ್ಕೆ ರಾಜ್ಯದ ಜನರು ಆಕ್ರೋಶಗೊಂಡಿದ್ದು, ಚುನಾವಣೆಗಳು ನಡೆದರೆ ಸೋಲುವ ಭಯದಿಂದ ಚುನಾವಣೆ ನಡೆಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ದಾವಣಗೆರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೇ ಇಲ್ಲದಂತಾಗಿದೆ. ಜಿಪಂ, ತಾಪಂ, ಮಹಾನಗರ ಪಾಲಿಕೆಯಲ್ಲಿ ಜನಪ್ರತಿನಿಧಿಗಳು ಇಲ್ಲದ ಕಾರಣ ಅಧಿಕಾರಿಗಳು ಆಡಿದ್ದೇ ಆಟ ಎಂಬಂತಾಗಿದೆ. ಪ್ರತಿಯೊಂದಕ್ಕೂ ಹಣಕ್ಕೆ ಬೇಡಿಕೆ ಇಡುತ್ತಿರುವ ಅಧಿಕಾರಿಗಳಿಗೆ ಭಯವೇ ಇಲ್ಲದಂತಾಗಿದೆ. ಜನರಂತೂ ಕೆಲಸಕ್ಕಾಗಿ ಓಡಾಡಿ ಸುಸ್ತಾಗುತ್ತಿದ್ದಾರೆ. ಅಧಿಕಾರಿಗಳು ಹಣಕ್ಕೆ ಬೇಡಿಕೆ ಇಡುತ್ತಿರುವುದನ್ನು ನೋಡಿ ಆತಂಕಕ್ಕೆ ಒಳಗಾಗಿದ್ದಾರೆ. ಇ-ಸ್ವತ್ತು, ಖಾತೆ ಬದಲಾವಣೆ ಸೇರಿದಂತೆ ಇತರೆ ಕೆಲಸಗಳು ಸರಿಯಾದ ಸಮಯದಲ್ಲಿ ಆಗದೇ ಜನರು ಅನುಭವಿಸುತ್ತಿರುವ ತೊಂದರೆ ದೇವರೇ ಬಲ್ಲ ಎಂದು ಹೇಳಿದ್ದಾರೆ.

ಜನರ ಹಿತ ಮರೆತ ಸರ್ಕಾರ

ಮುಖ್ಯಮಂತ್ರಿ ಬದಲಾವಣೆ ವಿಚಾರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ನಡೆಯುತ್ತಲೇ ಇತ್ತು. ಇದರಲ್ಲೇ ಕಾಲಹರಣ ಮಾಡದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿ ಆಗಿದೆ. ಈಗ ಸಿಎಂ ಆಗಿರುವ ಡಿ. ಕೆ. ಶಿವಕುಮಾರ್ ಅವರಂತೂ ಬಿಡದಿ ಟೌನ್ ಶಿಪ್ ಗೆ ತೋರಿದಷ್ಟು ಆಸಕ್ತಿ ರಾಜ್ಯದ ಜನರ ಹಿತ ಕಾಪಾಡಲು ಇಲ್ಲವಾಗಿದೆ. ರಾಜ್ಯದಲ್ಲಿ ಭೀಕರ ತಲೆದೋರಿದ್ದರೂ ಕೃಷಿ ಸಚಿವರೇ ಇಲ್ಲ. ಕೆ. ಜೆ. ಜಾರ್ಜ್ ಅವರನ್ನು ದಾವಣಗೆರೆ ಜಿಲ್ಲಾ ಉಸ್ತುವಾರಿಯಾಗಿ ಪ್ರಭಾರಿಯಾಗಿ ನೇಮಕ ಮಾಡಿದರೂ ಒಮ್ಮೆ ಬಂದು ಹೋದವರು ಮತ್ತೆ ಇತ್ತ ಬಂದೇ ಇಲ್ಲ. ಅಧಿಕಾರಿಗಳ ಮೇಲೆ ಹಿಡಿತ ಇಲ್ಲದಂತಾಗಿದ್ದು, ಯಾವುದೇ ಕೆಲಸಗಳು ಆಗುತ್ತಿಲ್ಲ. ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆ ಜನರು ತಕ್ಕ ಪಾಠ ಕಲಿಸಲು ಸಜ್ಜಾಗಿದ್ದಾರೆ ಎಂದು ರಾಜನಹಳ್ಳಿ ಶಿವಕುಮಾರ್ ಅವರು ಭವಿಷ್ಯ ನುಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *