Home ಕ್ರೈಂ ನ್ಯೂಸ್ ದಾವಣಗೆರೆ ಸಚಿವರ ಮನೆ ಸಮೀಪ ಸುಸ್ಥಿತಿಯಲ್ಲಿದ್ದ ಪಾರ್ಕ್ ಕಾಂಪೌಂಡ್ ತೆರವು: ಸಚಿವ ಎಸ್ಎಸ್ಎಂ ಹಾಗೂ ಜಿಲ್ಲಾಡಳಿತದ ವಿರುದ್ಧ ಬಿಜೆಪಿ ಬೃಹತ್ ಧರಣಿ ಸತ್ಯಾಗ್ರಹ
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

ದಾವಣಗೆರೆ ಸಚಿವರ ಮನೆ ಸಮೀಪ ಸುಸ್ಥಿತಿಯಲ್ಲಿದ್ದ ಪಾರ್ಕ್ ಕಾಂಪೌಂಡ್ ತೆರವು: ಸಚಿವ ಎಸ್ಎಸ್ಎಂ ಹಾಗೂ ಜಿಲ್ಲಾಡಳಿತದ ವಿರುದ್ಧ ಬಿಜೆಪಿ ಬೃಹತ್ ಧರಣಿ ಸತ್ಯಾಗ್ರಹ

Share
ದಾವಣಗೆರೆ
Share

ದಾವಣಗೆರೆ: ದಾವಣಗೆರೆ ನಗರದ ಗುಂಡಿ ಸರ್ಕಲ್ ಬಳಿ ಇರುವ ತೋಟಗಾರಿಕಾ ಇಲಾಖೆಗೆ ಸೇರಿದ ಉದ್ಯಾನವನದ ಗಟ್ಟಿಮುಟ್ಟಾಗಿದ್ದ ಕಾಂಪೌಂಡ್ ಗೋಡೆಯನ್ನು ಅನಗತ್ಯವಾಗಿ ಕೆಡವಿ, ಪುನಃ ನಿರ್ಮಾಣ ಮಾಡುವ ನೆಪದಲ್ಲಿ ಕೋಟ್ಯಂತರ ರೂಪಾಯಿ ಸಾರ್ವಜನಿಕ ಸಾರ್ವಜನಿಕ ಹಣ ದುರ್ಬಳಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ನಗರದ ಗುಂಡಿ ಸರ್ಕಲ್ ನಲ್ಲಿ ಭಾರತೀಯ ಜನತಾ ಪಾರ್ಟಿ ದಾವಣಗೆರೆ ಜಿಲ್ಲಾ ಘಟಕದ ವತಿಯಿಂದ ಬೃಹತ್ ಧರಣಿ ಸತ್ಯಾಗ್ರಹ ನಡೆಸಲಾಯಿತು.

ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಬಿಜೆಪಿ ಮುಖಂಡರು ಹಾಗೂ ಜನಪ್ರತಿನಿಧಿಗಳು, “ಕಾಂಗ್ರೆಸ್ ಸರ್ಕಾರ ಹಾಗೂ ದಾವಣಗೆರೆ ಜಿಲ್ಲಾಡಳಿತವು ಅಭಿವೃದ್ಧಿಯ ಹೆಸರಿನಲ್ಲಿ ವ್ಯಾಪಕ ಭ್ರಷ್ಟಾಚಾರ ಮತ್ತು ಅಕ್ರಮದಲ್ಲಿ ತೊಡಗಿದೆ. ಯಾವುದೇ ಕೊರತೆಯಿಲ್ಲದ, ಅತ್ಯಂತ ಸುಸ್ಥಿತಿಯಲ್ಲಿದ್ದ ಉದ್ಯಾನವನದ ಕಾಂಪೌಂಡ್ ಅನ್ನು ಧ್ವಂಸಗೊಳಿಸಿ, ಕೇವಲ ಕಮಿಷನ್ ಹಾಗೂ ಹೊಸ ಟೆಂಡರ್ ಪ್ರಕ್ರಿಯೆಯ ಲಾಭಕ್ಕಾಗಿ ಅನುದಾನ ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸಾರ್ವಜನಿಕ ಹಣದ ಪೋಲು:

ಸುಮಾರು ₹90 ಲಕ್ಷಕ್ಕೂ ಅಧಿಕ ಮೊತ್ತದ ಅನುದಾನವನ್ನು ನವೀಕರಣ ಹಾಗೂ ಮರುನಿರ್ಮಾಣದ ನೆಪದಲ್ಲಿ ಅನಗತ್ಯವಾಗಿ ಖರ್ಚು ಮಾಡಿ ಲೂಟಿ ಮಾಡಲಾಗುತ್ತಿದೆ ಎಂದು ದೂರಿದರು.

ತೋಟಗಾರಿಕಾ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಮನೆ ಸಮೀಪವೇ ಈ ಕಾಮಗಾರಿ ನಡೆಯುತ್ತಿದ್ದು, ಸುಸ್ಥಿತಿಯಲ್ಲಿದ್ದ ಕಾಂಪೌಂಡ್ ತೆರವುಗೊಳಿಸಿ ಮತ್ತೆ ಕಾಂಪೌಂಡ್ ನಿರ್ಮಾಣ ಮಾಡಲಾಗುತ್ತಿದೆ. ಇದಕ್ಕಿಂತ ಭ್ರಷ್ಟಾಚಾರಕ್ಕೆ ಸಾಕ್ಷಿ ಬೇಕಾ ಎಂದು ಪ್ರಶ್ನಿಸಿದರು.

ಜಿಲ್ಲೆಯಲ್ಲೇ ಉದ್ಯಾನವನಗಳ ಅಭಿವೃದ್ಧಿ ಹೆಸರಿನಲ್ಲಿ ಇಂತಹ ಅಕ್ರಮಗಳು ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ. ತಕ್ಷಣವೇ ಈ ಅಕ್ರಮ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕು ಮತ್ತು ಕಾಂಪೌಂಡ್ ತೆರವಿಗೆ ಕಾರಣರಾದ ಅಧಿಕಾರಿಗಳು
ಹಾಗೂ ಜನಪ್ರತಿನಿಧಿಗಳ ವಿರುದ್ಧ ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಮಾಜಿ ಶಾಸಕರು, ಜನಪ್ರತಿನಿಧಿಗಳು ಹಾಗೂ ನೂರಾರು ಪಕ್ಷದ ಕಾರ್ಯಕರ್ತರು ಭಾಗವಹಿಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂಬರುವ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ, ಮೆಳ್ಳಿಕಟ್ಟೆ ನಾಗರಾಜ್, ಬಿಜೆಪಿ ಮುಖಂಡ ಲೋಕಿಕೆರೆ ನಾಗರಾಜ್, ದೂಡಾ ಮಾಜಿ ಅಧ್ಯಕ್ಷ ಯಶವಂತರಾಜ್ ಜಾಧವ್, ಮಹಾನಗರ ಪಾಲಿಕೆ ಮಾಜಿ ಮೇಯರ್ ಎಸ್. ಟಿ. ವೀರೇಶ್, ಮುಖಂಡರಾದ ಶಿವಶಂಕರ್, ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವನಗೌಡ ಟಿ. ಪಾಟೀಲ್, ಹರೀಶ್ ಶಾಮನೂರು, ಟಿಂಕರ್ ಮಂಜಣ್ಣ, ಗುರು ಸೋಗಿ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

Share

Leave a comment

Leave a Reply

Your email address will not be published. Required fields are marked *