ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Davanagere: ಅಸಮರ್ಪಕ ವಿದ್ಯುತ್ ಪೂರೈಕೆಗೆ ರೊಚ್ಚಿಗೆದ್ದ ಕೇಸರಿ ಕಲಿಗಳು: ಸಂಸದ ಸಿದ್ದೇಶ್ವರ ನೇತೃತ್ವದಲ್ಲಿ ಕೆಇಬಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ

On: October 16, 2023 8:54 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:16-10-2023

ದಾವಣಗೆರೆ (Davanagere): ರಾಜ್ಯದಲ್ಲಿ ರೈತರು ಹಾಗೂ ಜನಸಾಮಾನ್ಯರಿಗೆ ಅಸಮರ್ಪಕ ವಿದ್ಯುತ್ ಪೂರೈಕೆ ಮಾಡುತ್ತಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ಜಿಲ್ಲಾ ಬಿಜೆಪಿ ಘಟಕವು ದಾವಣಗೆರೆ ಲೋಕಸಭಾ ಸದಸ್ಯ ಡಾ. ಜಿ. ಎಂ. ಸಿದ್ದೇಶ್ವರ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ನಗರದ ಅಂಬೇಡ್ಕರ್ ವೃತ್ತದ ಸಮೀಪದಲ್ಲಿನ ಕೆಇಬಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿತು.

Read Also This Story:

ಸ್ಕಾಚ್ ವಿಸ್ಕಿ (Scotch whisky) ಬಗ್ಗೆ ನಿಮಗೆಷ್ಟು ಗೊತ್ತು… ದೇಸಿ ಬ್ರಾಂಡ್‌ಗಳ ಭಾರೀ ಬೆಳವಣಿಗೆ: ಭಾರತದ ಸಿಂಗಲ್-ಮಾಲ್ಟ್ ಉದ್ಯಮದ ಏರಿಕೆ

ಮಾಜಿ ಸಚಿವ ಎಸ್. ಎ. ರವೀಂದ್ರನಾಥ್, ಹರಿಹರ ಬಿಜೆಪಿ ಶಾಸಕ ಬಿ. ಪಿ. ಹರೀಶ್, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಶಿವಯೋಗಿಸ್ವಾಮಿ, ಮಾಜಿ ಶಾಸಕರಾದ ಎಸ್. ವಿ. ರಾಮಚಂದ್ರಪ್ಪ, ಪ್ರೊ. ಲಿಂಗಣ್ಣ, ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರೇಶ್ ಹನಗವಾಡಿ, ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ, ಮಹಾನಗರ ಪಾಲಿಕೆ ಮಾಜಿ ಮೇಯರ್ ಗಳಾದ ಬಿ. ಜೆ. ಅಜಯಕುಮಾರ್, ಎಸ್. ಟಿ. ವೀರೇಶ್, ದೂಡಾ ಮಾಜಿ ಅಧ್ಯಕ್ಷ ಎ. ವೈ. ಪ್ರಕಾಶ್, ಲೋಕಿಕೆರೆ ನಾಗರಾಜ್, ಬಿ. ಎಂ. ಸತೀಶ್, ಮಾಯಕೊಂಡ ಬಿಜೆಪಿ ಯುವ ಮುಖಂಡ ಶ್ಯಾಮ್, ಕೊಂಡಜ್ಜಿ ಜಯಪ್ರಕಾಶ್, ಪಾಲಿಕೆ ಸದಸ್ಯ ಕೆ. ಎಂ. ವೀರೇಶ್ ಪೈಲ್ವಾನ್ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಬೆಸ್ಕಾಂನ ಅಧೀಕ್ಷಕ ಅಭಿಯಂತರ ಕಚೇರಿ ಮುಂದೆ ನೂರಾರು ಕಾರ್ಯಕರ್ತರು, ಮುಖಂಡರು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಪ್ರತಿಭಟಿಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಹಾಕಿದರು.

ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಮಾತನಾಡಿ, ಕರ್ನಾಟಕ ರಾಜ್ಯದಿಂದ ಸಂಗ್ರಹ ಆದ ಹಣವನ್ನು ಪಂಚ ರಾಜ್ಯಗಳ ಚುನಾವಣೆಗೆ ಪಂಡಿಂಗ್ ಮಾಡಲಾಗುತ್ತಿದೆ. ಇತ್ಯ ರಾಜ್ಯದ ಕಾವೇರಿ ನೀರನ್ನು ತಮಿಳುನಾಡು ರಾಜ್ಯಕ್ಕೆ ಬಿಡುವ ಮೂಲಕ ರಾಜ್ಯ ವಿರೋಧಿ ನೀತಿ ಅನುಸರಿಸುತ್ತಿದೆ. ಗ್ಯಾರೆಂಟಿ ಯೋಜನೆ 1.28ಕೋಟಿ ಮಹಿಳೆಯರಿಗೆ ಬರಬೇಕಾದ ಹಣ ಕೇವಲ 50ಲಕ್ಷ ಜನರಿಗೆ ಮಾತ್ರ ನೀಡಲಾಗುತ್ತಿದೆ. ಅದೇ ರೀತಿ ಅನ್ನ ಭಾಗ ಯೋಜನೆಯಲ್ಲಿ ಕೂಡ ಅಕ್ಕಿ ಸರಿಯಾದ ರೀತಿಯಲ್ಲಿ ಕೊಡುತ್ತಿಲ್ಲ. ಎಲ್ಲಾ ಗ್ಯಾರೆಂಟಿ ಯೋಜನೆಗಳು ವಿಫಲವಾಗಿವೆ ಎಂದು ಆರೋಪಿಸಿದರು.

ಎಲ್ಲಾ ಹಣವನ್ನು ಲೂಟಿ ಮಾಡಲಾಗುತ್ತಿದೆ‌. ಎಲ್ಲಾ ಯೋಜನೆಗಳ ಹಣವನ್ನು ಲೂಟಿ ಮಾಡಲಾಗುತ್ತಿದೆ. ರಾಜ್ಯ ಸರ್ಕಾರದ ದಂಧೆಯ ಹಣ ಅಂಬಿಕಾಪತಿ ಮನೆಯಲ್ಲಿ ಸಿಕ್ಕಿದೆ.‌ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರಿಗೆ ನೈತಿಕತೆ ಇದ್ದರೆ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ ಅವರು, ರಾಜ್ಯದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಸಚಿವರು, ಶಾಸಕರಿಗೆ ಮಾತ್ರ 24ತಾಸು ಕರೆಂಟ್ ಸಿಗುತ್ತದೆ. ಕಾರಣ ಎಟಿಎಮ್ ಮಿಷನ್ ರೀತಿಯಲ್ಲಿ ಹಣ ವಸೂಲಿ ಮಾಡಬೇಕಲ್ಲ ಎಂದು ಆರೋಪಿಸಿದರು.

ರಾಜ್ಯದಲ್ಲಿರುವುದು ಒಬ್ಬ ಕಳ್ಳ, ಒಬ್ಬ ಮಳ್ಳ ಸರ್ಕಾರ, ಕಮೀಷನ್ ದಂಧೆ ಮಾಡುತ್ತಿದೆ. ರಾಜ್ಯದ ಜನರಿಗೆ ನಿರಂತರ ವಿದ್ಯುತ್ ಕೊಡದೇ ಕತ್ತಲೆ ಭಾಗ್ಯ ತಂದಿದೆ‌. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಶೂನ್ಯವಾಗಿದೆ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಲೂಟಿ ಹೊಡೆಯುತ್ತಿರುವ ಈ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಶಾಪ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹರಿಹರ ಶಾಸಕ ಬಿ.ಪಿ.ಹರೀಶ್ ಮಾತನಾಡಿ, ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಮಾಡಿ  ರಾಜ್ಯವನ್ನು ಕತ್ತಲೆ ಕೂಪಕ್ಕೆ ತಳ್ಳಿದೆ. ರೈತರಿಗೆ ಅನ್ಯಾಯ ಅಗುತ್ತಿದ್ದರೂ ಸಹ ರಾಜ್ಯ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ವಿದ್ಯುತ್ ಇಲ್ಲದೇ ರಾಜ್ಯದ ರೈತರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಯಾವುದೇ ಗ್ಯಾರಂಟಿ ಸಮರ್ಪಕವಾಗಿ ರಾಜ್ಯದ ಮಹಿಳೆಯರಿಗೆ ತಲುಪಿಲ್ಲ. ಯಾವುದೇ ಅನ್ಯಾಯ ಮಾಡಿದ ಸರ್ಕಾರವನ್ನು ಕಿತ್ತೊಗೆಯುವ ತನಕ ವಿಶ್ರಮಿಸಬಾರದು. ನರೇಂದ್ರ ಮೋದಿ ಅವರು ಮತ್ತೆ ಪ್ರಧಾನ ಮಂತ್ರಿ ಮಾಡಿ, ಭಾರತವನ್ನು ವಿಶ್ವ ಗುರುವನ್ನಾಗಿ ಮಾಡುವತ್ತ ದೇಶದ ಜನರು ಕೈ ಜೋಡಿಸಲಿ ಎಂದು ಹೇಳಿದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment