Home ದಾವಣಗೆರೆ ರಾಹುಲ್ ಗಾಂಧಿ ವಂಶ ಧ್ವಂಸ ಮಾಡ್ತೇವೆಂದ ಬಿಜೆಪಿ ಶಾಸಕ ಯಶಪಾಲ್ ವಿರುದ್ಧ ಕಠಿಣ ಕ್ರಮಕ್ಕೆ ಬಿ. ಎನ್. ವಿನಾಯಕ್ ಒತ್ತಾಯ
ದಾವಣಗೆರೆಬೆಂಗಳೂರು

ರಾಹುಲ್ ಗಾಂಧಿ ವಂಶ ಧ್ವಂಸ ಮಾಡ್ತೇವೆಂದ ಬಿಜೆಪಿ ಶಾಸಕ ಯಶಪಾಲ್ ವಿರುದ್ಧ ಕಠಿಣ ಕ್ರಮಕ್ಕೆ ಬಿ. ಎನ್. ವಿನಾಯಕ್ ಒತ್ತಾಯ

Share
ಶಾಸಕ
Share

ದಾವಣಗೆರೆ: ಉಡುಪಿಯಲ್ಲಿ ನಡೆದ ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತವರ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ ಮತ್ತು ಬೆದರಿಕೆ ಹಾಕಿರುವ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜನಪ್ರತಿನಿಧಿಯಾಗಿ ಮುಂದುವರಿಯುವ ನೈತಿಕತೆ ಇಲ್ಲ. ಕೂಡಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರೂ ಆದ ಕಾಂಗ್ರೆಸ್ ಎಸ್ಸಿ ಘಟಕದ ಉಪಾಧ್ಯಕ್ಷ ಬಿ. ಎನ್. ವಿನಾಯಕ್ ಒತ್ತಾಯಿಸಿದ್ದಾರೆ.

ಪ್ರತಿಭಟನಾ ಸಭೆಯಲ್ಲಿ ದ್ವೇಷ ಭಾಷಣ ಮಾಡಿದ ಆರೋಪ ಹೊತ್ತಿರುವ ಯಶಪಾಲ್ ಸುವರ್ಣ ಸಮಾಜದಲ್ಲಿ ಅಶಾಂತಿ, ದ್ವೇಷ ಹುಟ್ಟಿಸುವ ಹುನ್ನಾರ ನಡೆಸಿರುವುದು ಮಾತಿನಿಂದ ಸ್ಪಷ್ಟವಾಗಿದೆ. ರಾಹುಲ್ ಗಾಂಧಿ ಒಬ್ಬ ಡ್ರಗ್ಸ್ ಅಡಿಟ್ ಮತ್ತು ರಾಹುಲ್ ಗಾಂಧಿ ವಂಶವನ್ನು ಧ್ವಂಸ ಮಾಡುತ್ತೇವೆಂಬ ಹೇಳಿಕೆ ನೀಡುವ ಮೂಲಕ ತಲೆತಗ್ಗಿಸುವಂಥ ಮಾತನಾಡಿದ್ದಾರೆ. ಇಂಥವರಿಗೆ ಜನರು ಮುಂಬರುವ ದಿನಗಳಲ್ಲಿ ತಕ್ಕ ಪಾಠ ಕಲಿಸುವುದು ಖಚಿತ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ವೈಫಲ್ಯಗಳ ವಿರುದ್ಧ ಸಮರ್ಥವಾಗಿ ಹೋರಾಟ ಮಾಡುತ್ತಿರುವ ರಾಹುಲ್ ಗಾಂಧಿ ಅವರ ಜನಪ್ರಿಯತೆ ಹೆಚ್ಚಿದೆ. ನೀಟ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ ನಡೆಸಿ, ಕೋಟ್ಯಂತರ ವಿದ್ಯಾರ್ಥಿಗಳ ಕಣ್ಮಣಿಯಾಗಿದ್ದಾರೆ. ಜನಪ್ರಿಯತೆ ಸಹಿಸದೇ ಕ್ಷುಲ್ಲಕ ಮತ್ತು ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಬಿಜೆಪಿಯ ಸಂಸ್ಕೃತಿ ಏನೆಂಬುದನ್ನು ತೋರಿಸಿದ್ದಾರೆ ಎಂದು ಬಿ. ಎನ್. ವಿನಾಯಕ್ ಅವರು ಪತ್ರಿಕಾ ಹೇಳಿಕೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *