Site icon Kannada News-suddikshana

Davanagere: ಕರ್ನಾಟಕ ಬಂದ್‌ಗೆ ಕರ್ನಾಟಕ ಹಿತರಕ್ಷಣಾ ವೇದಿಕೆ ಬೆಂಬಲ: ಟಾರ್ಗೆಟ್ ಅಸ್ಲಾಂ ಮಾಹಿತಿ

SUDDIKSHANA KANNADA NEWS/ DAVANAGERE/ DATE:29-09-2023

ದಾವಣಗೆರೆ (Davanagere): ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಸೆ. 29ರ ಶುಕ್ರವಾರ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಸುವರ್ಣ ಕರ್ನಾಟಕ ಹಿತರಕ್ಷಣಾ ವೇದಿಕೆ ಬೆಂಬಲ ಸೂಚಿಸಿದೆ ಎಂದು ಸಂಸ್ಥಾಪಕ ಅಧ್ಯಕ್ಷ ಟಾರ್ಗೆಟ್ ಅಸ್ಲಾಂ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: 

Davanagere: ಮಿಲಾದ್ ಗುಂಬಸ್ ಗೆ ಸಚಿವ ಮಲ್ಲಿಕಾರ್ಜುನ್ ಮಾಲಾರ್ಪಣೆ: ಈದ್ ಮಿಲಾದ್ ಹಬ್ಬದಲ್ಲಿ ದೇಶದ ಶಾಂತಿ, ಸಮೃದ್ಧಿ, ಉತ್ತಮ ಮಳೆ, ಬೆಳೆಯಾಗಲೆಂದು ಪ್ರಾರ್ಥನೆ

ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿದೆ. ಕಾವೇರಿ ಭಾಗದ ಜಿಲ್ಲೆಗಳಲ್ಲಿ ನೀರು ಸಿಗದೆ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯಲು ನೀರಿಲ್ಲ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ. ತಮಿಳುನಾಡಿಗೆ ಹರಿಯುವ ನೀರು ನಿಲ್ಲಬೇಕು ಎಂದು ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರ ಕಾವೇರಿ ವಿಚಾರದಲ್ಲಿ ಮಲತಾಯಿ ಧೋರಣೆ ಮಾಡುತ್ತಿದೆ. ಮಲತಾಯಿ ಧೋರಣೆ ನಿಲ್ಲಿಸಿ, ಈ ಸಮಸ್ಯೆಯನ್ನು ಬಗೆಹರಿಸಲು ಕೇಂದ್ರ ಸರ್ಕಾರ ಪ್ರಯತ್ನಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Exit mobile version