ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬಂಡಾಯದ ಬಿಸಿ ತಲೆತೋರಿದೆ. ತಾಯಿ ಪ್ರಭಾ ಮಲ್ಲಿಕಾರ್ಜುನ್ ಜೊತೆಗೆ ತೆರಳಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಮತ್ತೊಬ್ಬ ಕಾಂಗ್ರೆಸ್ ಮುಖಂಡ ಸಾದಿಕ್ ಪೈಲ್ವಾನ್ ಉಮೇದುವಾರಿಕೆ ಸಲ್ಲಿಕೆ ಮಾಡಿ ಶಾಕ್ ನೀಡಿದ್ದಾರೆ.
ದಾವಣಗೆರೆ ಮಹಾನಗರ ಪಾಲಿಕೆಯ ಚುನಾವಣಾಧಿಕಾರಿ ಕಚೇರಿಗೆ ಬೆಂಬಲಿಗರ ಜೊತೆಗೆ ಆಗಮಿಸಿ ಸಾದಿಕ್ ಪೈಲ್ವಾನ್ ನಾಮಪತ್ರ ಸಲ್ಲಿಸಿದರು. ಈ ಮೂಲಕ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಹಾಗೂ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ನಿರ್ಧಾರಕ್ಕೆ ತೊಡೆತಟ್ಟಿ ಸಾದಿಕ್ ಪೈಲ್ವಾನ್ ಬಂಡಾಯದ ರಣಕಹಳೆ ಮೊಳಗಿಸಿದ್ದಾರೆ.
ನಾನು ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತ. ನನ್ನನ್ನು ಎಲ್ಲರೂ ಗುರುತಿಸಿದ್ದಾರೆ. ನಾನು ಕಾಂಗ್ರೆಸ್ ನಿಂದಲೇ ನಾಮಪತ್ರ ಸಲ್ಲಿಸಿದ್ದೇನೆ. ಸೋಮವಾರ ಮತ್ತೆ ಬೆಂಬಲಿಗರೊಂದಿಗೆ ಆಗಮಿಸಿ ಮತ್ತೊಮ್ಮೆ ಕಾಂಗ್ರೆಸ್ ಅಭ್ಯರ್ಥಿಯಾಗಿಯೇ ನಾಮಪತ್ರ ಸಲ್ಲಿಸುತ್ತೇನೆ. ನಾನು ದಾವಣಗೆರೆಯಲ್ಲಿ ಪ್ರಚಾರಕ್ಕೆ ಹೋಗುತ್ತೇನೆ ಎಂದು ತಿಳಿಸಿದರು.
ನನಗೆ ಬಿ ಫಾರಂ ಸಿಗುವ ವಿಶ್ವಾಸ ಇದೆ. ಹೈಕಮಾಂಡ್ ನಲ್ಲಿ ಮಾತುಕತೆ ನಡೆಯುತ್ತಿದೆ. ಫೋನ್ ಬಂದಿದೆ. ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಪ್ರಾರ್ಥನೆಗೆ ಹೋಗಬೇಕಿತ್ತು. ನನ್ನ ಅಣ್ಣ ತಮ್ಮಂದಿರು ಬೆಂಗಳೂರಿನಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯೆಂದೇ ಕೊಟ್ಟಿದ್ದೇನೆ. ಎಲ್ಲರಿಗೂ ಸ್ವಾತಂತ್ರ್ಯ ಇದೆ. ಅವರಿಗೂ ಇದೆ. ನೀವೂ ಕೊಡಬಹುದು ಎಂದು ಹೇಳಿದರು.
ನಾಲ್ಕನೇ ಬಾರಿ ಅರ್ಜಿ ಹಾಕುತ್ತಿದ್ದೇನೆ. ಆದರೂ ಟಿಕೆಟ್ ನೀಡಿಲ್ಲ. ಸೋಮವಾರ ಕಾಂಗ್ರೆಸ್ ನಿಂದ ಬಿ ಫಾರಂ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಬಗ್ಗೆ ಮುಖಂಡರ ಜೊತೆ ಸಮಾಲೋಚನೆ ನಡೆಸಿ ನಿರ್ಧರಿಸುತ್ತೇನೆ ಎಂದು ತಿಳಿಸಿದರು.
- B-Form
- Congress Rebellion
- Davanagere By-election
- Davanagere South Constituency.
- Dr. Prabha Mallikarjun
- Independent Candidate.
- Karnataka Politics
- Sadiq Pailwan
- Samarth Shamanur
- SS Mallikarjun
- ಎಸ್. ಎಸ್. ಮಲ್ಲಿಕಾರ್ಜುನ್
- ಕರ್ನಾಟಕ ರಾಜಕೀಯ
- ಕಾಂಗ್ರೆಸ್ ಬಂಡಾಯ
- ದಾವಣಗೆರೆ ಉಪಚುನಾವಣೆ
- ದಾವಣಗೆರೆ ರಾಜಕೀಯ
- ಪಕ್ಷೇತರ ಅಭ್ಯರ್ಥಿ
- ಪ್ರಭಾ ಮಲ್ಲಿಕಾರ್ಜುನ್
- ಬಿ ಫಾರಂ
- ಸಮರ್ಥ್ ಶಾಮನೂರು
- ಸಾದಿಕ್ ಪೈಲ್ವಾನ್





Leave a comment