Home ದಾವಣಗೆರೆ ಸಾದಿಕ್ ಪೈಲ್ವಾನ್ ಸಂಧಾನದ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ದಾವಣಗೆರೆಬೆಂಗಳೂರು

ಸಾದಿಕ್ ಪೈಲ್ವಾನ್ ಸಂಧಾನದ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

Share
ಸಿದ್ದರಾಮಯ್ಯ
Share

ಬೆಂಗಳೂರು/ ದಾವಣಗೆರೆ: ದಾವಣಗೆರೆ ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಸಾದಿಕ್ ಪೈಲ್ವಾನ್ ಅವರು ಇಂದು ತಮ್ಮ ಬೆಂಬಲಿಗರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದರು.

ಸಾದಿಕ್ ಪೈಲ್ವಾನ್ ಜೊತೆಗಿನ ಸಂಧಾನದ ಬಳಿಕ ಮಾತನಾಡಿದ ಸಿದ್ದರಾಮಯ್ಯ ಅವರು, ಸಾದಿಕ್ ಪೈಲ್ವಾನ್ ನನ್ನನ್ನು ಭೇಟಿಯಾಗಿ ಮಾತುಕತೆ ನಡೆಸಿ, ಮುಂದೆಯೂ ನಮ್ಮ ಜೊತೆ ಇರುವುದಾಗಿ ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯ ರಾಜಕೀಯ ಕಣದಲ್ಲಿ ಉಪ ಚುನಾವಣೆಯ ಕಾವು ಏರುತ್ತಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಸಾದಿಕ್ ಪೈಲ್ವಾನ್ ಅವರು ತಮ್ಮ ಬೆಂಬಲಿಗರ ಪಡೆಯೊಂದಿಗೆ ಸಿದ್ದರಾಮಯ್ಯರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಚುನಾವಣಾ ತಯಾರಿ ಮತ್ತು ಮುಂದಿನ ರಾಜಕೀಯ ನಡೆಗಳ ಕುರಿತು ಚರ್ಚಿಸಿದರು. ಅಲ್ಲದೆ, “ಮುಂದಿನ ದಿನಗಳಲ್ಲಿಯೂ ನಾವು ನಿಮ್ಮ ಜೊತೆಗಿದ್ದು, ಒಗ್ಗಟ್ಟಿನಿಂದ ಸಾಗಲಿದ್ದೇವೆ” ಎಂದು ಭರವಸೆ ನೀಡಿದರು. ಸಾದಿಕ್ ಪೈಲ್ವಾನ್ ಅವರ ಈ ಭೇಟಿಯು ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣಾ ಕಣದಲ್ಲಿ ಹೊಸ ಕುತೂಹಲಕ್ಕೆ ಕಾರಣವಾಗಿದೆ. ಅವರ ಬೆಂಬಲಿಗರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.

Share

Leave a comment

Leave a Reply

Your email address will not be published. Required fields are marked *