ದಾವಣಗೆರೆ: ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದೆ. ಜಿಲ್ಲೆಯಾದ್ಯಂತ ಸ್ಥಾಪಿಸಲಾಗಿರುವ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ.
ಅಕ್ರಮ ನಗದು ಮತ್ತು ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ ರವರು ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾಧ್ಯಮ ಘೋಷ್ಠಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು.
ನಗದು ವಶ:
ಆಜಾದ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಗನಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದ 1,12,000 ರೂಪಾಯಿ ನಗದನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಹಣದ ಮೂಲದ ಬಗ್ಗೆ ತನಿಖೆ ನಡೆಯುತ್ತಿದೆ.
ಅಕ್ರಮ ಮದ್ಯ ಜಪ್ತಿ:
ಜಿಲ್ಲೆಯಲ್ಲಿ ಇದುವರೆಗೆ 7 ಅಬಕಾರಿ ಪ್ರಕರಣಗಳನ್ನು ದಾಖಲಿಸಲಾಗಿದ್ದು, ಸುಮಾರು 22 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಪರವಾನಗಿ ಇಲ್ಲದೆ ಮದ್ಯ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.
ಚೆಕ್‌ಪೋಸ್ಟ್‌ಗಳ ಸಕ್ರಿಯತೆ:
ಜಿಲ್ಲೆಯಲ್ಲಿ ಒಟ್ಟು 11 ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲಾಗಿದ್ದು, 8 ಫ್ಲೈಯಿಂಗ್ ಸ್ಕ್ವಾಡ್ ತಂಡಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.
- Cash Seizure
- Davanagere Bye-election
- DAVANAGERE NEWS
- Election violations
- Flying Squad
- Illegal Liquor Seized
- Karnataka Election Updates.
- Maganahalli Checkpost
- Model Code of Conduct.
- SP Dr. Shekhar HT
- ಅಕ್ರಮ ಮದ್ಯ ಜಪ್ತಿ
- ಕರ್ನಾಟಕ ಚುನಾವಣೆ 2026
- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
- ಡಾ. ಶೇಖರ್ ಹೆಚ್.ಟಿ
- ದಾವಣಗೆರೆ ಉಪಚುನಾವಣೆ
- ದಾವಣಗೆರೆ ಸುದ್ದಿ
- ನಗದು ವಶ
- ಫ್ಲೈಯಿಂಗ್ ಸ್ಕ್ವಾಡ್
- ಮಾಗನಹಳ್ಳಿ ಚೆಕ್ಪೋಸ್ಟ್
- ಮಾದರಿ ನೀತಿ ಸಂಹಿತೆ





Leave a comment