ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Davanagere: ದಾವಣಗೆರೆಯಲ್ಲಿ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಿಸಿ ಶಾಮನೂರು ಶಿವಶಂಕರಪ್ಪ ಏನಂದ್ರು…?

On: August 12, 2023 5:33 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:12-08-2023

ದಾವಣಗೆರೆ: ದಾವಣಗೆರೆ (Davanagere) ದಕ್ಷಿಣ ಮತ್ತು ಉತ್ತರ ವಿಧಾನಸಭಾ ಕ್ಷೇತ್ರದ ಅರ್ಹ ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಕಾಂಗ್ರೆಸ್ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪನವರು ಫಲಾನುಭವಿಗಳಿಗೆ ಯಂತ್ರಚಾಲಿಕ ದ್ವಿಚಕ್ರ ವಾಹನ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ ಶಾಮನೂರು ಶಿವಶಂಕರಪ್ಪ ಅವರು ಫಲಾನುಭವಿಗಳು ವಾಹನಗಳನ್ನು ತಮ್ಮ ದುಡಿಮೆಗೆ ಬಳಸಿಕೊಂಡು ಸಬಲರಾಗಿ ಎಂದು ಕರೆ ನೀಡಿದರು.

ಈ ಸುದ್ದಿಯನ್ನೂ ಓದಿ: 

Independence Day: ಸ್ವಾತಂತ್ರ್ಯ ದಿನಾಚರಣೆಯಂದು ಇರಬೇಕು ಶಾಲಾ ಮಕ್ಕಳ ಕಾಳಜಿ: ಡಿ. ಎಸ್. ಹೇಮಂತ್ ರು ಕೊಟ್ಟಿರುವ ಸಲಹೆ, ಮನವಿ ಏನು…?

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ದಾವಣಗೆರೆ ಇವರಿಂದ 2022-23ನೇ ಸಾಲಿಗೆ ಇಲಾಖೆಯ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆಯಡಿ ಆಯ್ಕೆಯಾದ ಅರ್ಹ 10 ವಿಕಲಚೇತನ ಫಲಾನುಭವಿಗಳನ್ನು ಆಯ್ಕೆ ಮಾಡಿದ್ದು, ಜಿಲ್ಲೆಯ ಅರ್ಹ ವಿಕಲಚೇತನರಿಗೆ ವಾಹನಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಮಾತನಾಡಿ ವಿಕಲಚೇತನರು ಸರ್ಕಾರದ ಸೌಲಭ್ಯಗಳನ್ನು ಪಡೆದು ಸ್ವಾವಲಂಬಿ ಜೀವನ ನಡೆಸುವಂತೆ ಕರೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಅಧಿಕಾರಿ ಡಾ. ಪ್ರಕಾಶ್ ಅಡಿಗ ಮತ್ತಿತರರಿದ್ದರು.

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment