Home ಕ್ರೈಂ ನ್ಯೂಸ್ ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಬ್ಲಾಸ್ಟ್ ಕೇಸ್ ಬಗ್ಗೆ ತನಿಖೆ: ಒಂದು ವಾರ ಒಟಿ ಬಂದ್, ಡಿಸಿ ಗಂಗಾಧರ ಸ್ವಾಮಿ ಹೇಳಿದ್ದೇನು?
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಬ್ಲಾಸ್ಟ್ ಕೇಸ್ ಬಗ್ಗೆ ತನಿಖೆ: ಒಂದು ವಾರ ಒಟಿ ಬಂದ್, ಡಿಸಿ ಗಂಗಾಧರ ಸ್ವಾಮಿ ಹೇಳಿದ್ದೇನು?

Share
ದಾವಣಗೆರೆ
Share

ದಾವಣಗೆರೆ: ಇಲ್ಲಿನ ಪ್ರಸಿದ್ಧ ಚಿಗಟೇರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶಸ್ತ್ರಚಿಕಿತ್ಸೆ ಕೊಠಡಿಯಲ್ಲಿ (Operation Theatre) ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡಿದ್ದು, ಭಾರಿ ಅವಘಡವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಘಟನೆಯ ತೀವ್ರತೆಗೆ ಆಪರೇಷನ್ ಥಿಯೇಟರ್ ಜಖಂಗೊಂಡಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ವೈದ್ಯಕೀಯ ಉಪಕರಣಗಳು ಹಾನಿಗೊಳಗಾಗಿವೆ ಎಂದು ತಿಳಿದುಬಂದಿದೆ. ಅಧಿಕಾರಿಗಳ ಮುಂದಾಲೋಚನೆ ಹಾಗೂ ಸಮಯಪ್ರಜ್ಞೆಯಿಂದಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ, ತನಿಖೆಗೆ ಆದೇಶ:

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ದಾವಣಗೆರೆ ಜಿಲ್ಲಾಧಿಕಾರಿ (ಡಿಸಿ) ಗಂಗಾಧರ ಸ್ವಾಮಿ ಅವರು ಪರಿಸ್ಥಿತಿಯನ್ನು ಪರಿಶೀಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ಆದೇಶಿಸಲಾಗಿದೆ. ಅಗ್ನಿಶಾಮಕ ದಳ ಮತ್ತು ಬೆಸ್ಕಾಂ (BESCOM) ಇಲಾಖೆಯ ತಾಂತ್ರಿಕ ವರದಿಗಳ ಆಧಾರದ ಮೇಲೆ ಮುಂದಿನ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು” ಎಂದರು.

ಒಂದು ವಾರದಲ್ಲಿ ಶಸ್ತ್ರಚಿಕಿತ್ಸೆ ಪುನರಾರಂಭ:

“ಮೇಲ್ನೋಟಕ್ಕೆ ಇದು ಆಕ್ಸಿಜನ್ ಸಿಲಿಂಡರ್ ಸ್ಫೋಟ ಎಂದು ಕಂಡುಬಂದಿದೆ. ಇದು ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿದೆಯೇ ಅಥವಾ ತಾಂತ್ರಿಕ ದೋಷವೇ ಎಂಬುದನ್ನು ಪತ್ತೆ ಹಚ್ಚಲಾಗುವುದು. ಸದ್ಯ ಆಪರೇಷನ್ ಥಿಯೇಟರ್‌ಗೆ ಹಾನಿಯಾಗಿದ್ದು, ಯುದ್ಧೋಪಾದಿಯಲ್ಲಿ ದುರಸ್ತಿ ಕಾರ್ಯ ಕೈಗೊಂಡು, ಒಂದು ವಾರದೊಳಗೆ ಶಸ್ತ್ರಚಿಕಿತ್ಸೆಗಳನ್ನು ಪುನರಾರಂಭಿಸಲು ಕ್ರಮ ವಹಿಸಲಾಗುವುದು. ಸಾರ್ವಜನಿಕರು ಆತಂಕ ಪಡಬೇಕಾಗಿಲ್ಲ, ರೋಗಿಗಳು ಹಾಗೂ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ” ಎಂದು ಡಿಸಿ ಭರವಸೆ ನೀಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles