Home ಕ್ರೈಂ ನ್ಯೂಸ್ ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಸಿಲಿಂಡರ್ ಸ್ಫೋಟ: ಅಧಿಕಾರಿಗಳೊಂದಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಮಹತ್ವದ ಚರ್ಚೆ
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಸಿಲಿಂಡರ್ ಸ್ಫೋಟ: ಅಧಿಕಾರಿಗಳೊಂದಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಮಹತ್ವದ ಚರ್ಚೆ

Share
ದಾವಣಗೆರೆ
Share

ದಾವಣಗೆರೆ: ನಗರದ ಚಿಗಟೇರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದ ಹಿನ್ನೆಲೆಯಲ್ಲಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಈ ವೇಳೆ ಆಸ್ಪತ್ರೆಯ ಅಧಿಕಾರಿಗಳು ಹಾಗೂ ವೈದ್ಯರಿಂದ ಘಟನೆಯ ಕುರಿತು ಸಮಗ್ರ ಮಾಹಿತಿ ಪಡೆದು, ಅಗ್ನಿ ಅವಘಡದಿಂದ ಉಂಟಾದ ಹಾನಿ ಹಾಗೂ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರವಾಗಿ ಚರ್ಚಿಸಿದರು.

ಅಗ್ನಿಶಾಮಕ ದಳದ ಸಿಬ್ಬಂದಿ ಸಮಯೋಚಿತವಾಗಿ ಕಾರ್ಯನಿರ್ವಹಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿರುವುದು ಹಾಗೂ ಅವರ ತ್ವರಿತ ಕಾರ್ಯಾಚರಣೆಯಿಂದ ಸಂಭವಿಸಬಹುದಾಗಿದ್ದ ಹೆಚ್ಚಿನ ಅನಾಹುತ ತಪ್ಪಿದೆ ಎಂದರು.

ಅಗ್ನಿ ಅವಘಡದಿಂದ ತಾತ್ಕಾಲಿಕವಾಗಿ ವ್ಯತ್ಯಯಗೊಂಡಿರುವ ವೈದ್ಯಕೀಯ ಸೇವೆಗಳನ್ನು ಶೀಘ್ರದಲ್ಲೇ ಪುನರಾರಂಭಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗಳನ್ನು ಕಲ್ಪಿಸಿ, ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Share

Leave a comment

Leave a Reply

Your email address will not be published. Required fields are marked *