ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ಇನ್ನೂ ಪ್ರಕಟಗೊಂಡಿಲ್ಲ. ಈಗಾಗಲೇ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಸ್ಥಾನದಿಂದ ಆರು ವರ್ಷಗಳ ಕಾಲ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು. ಇದಾದ ಕೆಲವೇ ದಿನಗಳಲ್ಲಿ ಅಬ್ದುಲ್ ಜಬ್ಬಾರ್ ಟೀಂಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್ ಕೊಟ್ಟಿದೆ.
ಈಗ ಕಾಂಗ್ರೆಸ್ ಪಕ್ಷದ ಮುಖಂಡ ಎಂದು ಹೇಳಿಕೊಳ್ಳುತ್ತಿದ್ದ ಎಂ. ಟಿ. ಸುಭಾಶ್ಚಂದ್ರ ಬೋಸ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಟಾಟಿಸಿ ಆದೇಶ ಹೊರಡಿಸಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ಸುಭಾಶ್ಚಂದ್ರ ಅವರನ್ನು ಉಚ್ಚಾಟನೆ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್. ಬಿ. ಮಂಜಪ್ಪ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಮಾಜಿ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಸುಭಾಶ್ಚಂದ್ರ ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗದೇ ಪಕ್ಷದ ನಾಯಕರ ವಿರುದ್ಧ ಮತ್ತು ಪಕ್ಷದ ಸಿದ್ಧಾಂತಕ್ಕೆ ವಿರುದ್ಧವಾಗಿ ಹೇಳಿಕೆಗಳನ್ನು ನೀಡುತ್ತಾ ಬಂದಿದ್ದಾರೆ. ಈ ಬಗ್ಗೆ ನಿಮಗೆ ಅನೇಕ ಬಾರಿ ಮೌಖಿಕವಾಗಿ ತಿಳಿ ಹೇಳಿದರೂ ಪದೇ ಪದೇ ಪಕ್ಷ ಮತ್ತು ಪಕ್ಷದ ನಾಯಕರ ವಿರುದ್ಧ ಹೇಳಿಕೆಗಳನ್ನು ನೀಡುತ್ತಿರುವ ತಮ್ಮನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟಿಸುತ್ತಿದ್ದೇನೆ ಎಂದು ಹೆಚ್. ಬಿ. ಮಂಜಪ್ಪ ಅವರು ಮಾಹಿತಿ ನೀಡಿದ್ದಾರೆ.





Leave a comment