ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಉದ್ದೇಶಪೂರ್ವಕವಾಗಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಕಾಂಗ್ರೆಸ್ ಪಕ್ಷದ ಬಗ್ಗೆ ಆರೋಪ ಮಾಡಿದ್ದಲ್ಲದೇ, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಪಾಲ್ಗೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಆರು ಮುಖಂಡರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್. ಬಿ. ಮಂಜಪ್ಪ ಅವರು, ಯೂಟ್ಯೂಬ್, ವ್ಯಾಟ್ಸಪ್ ಮೂಲಕ ಪಕ್ಷಕ್ಕೆ ಮುಜುಗರ ತರುವಂತ ರೀತಿಯಲ್ಲಿ ನಡೆದುಕೊಂಡಿದ್ದಾರೆ. ಈಗಾಗಲೇ ವಿಡಿಯೋ ಸಮೇತ ನಮಗೆ ಸಾಕ್ಷ್ಯ ಸಿಕ್ಕಿದೆ. ಜಿಲ್ಲಾ ಕಾಂಗ್ರೆಸ್ ನಿಂದ ಉಚ್ಚಾಟನೆ ಮಾಡಿ, ಕೆಪಿಸಿಸಿ ಶಿಸ್ತು ಸಮಿತಿಗೆ ಶಿಫಾರಸು ಮಾಡಿ ಕಳುಹಿಸಲಾಗಿದೆ ಎಂದು ತಿಳಿಸಿದರು.
ಎಂ. ಟಿ. ಸುಭಾಷ್ ಚಂದ್ರ, ಸಿರಾಜ್ ಅಹ್ಮದ್, ಗನಿ ತಾಯೇದ್, ತಿಪ್ಪೇಶ್, ಮನ್ಸೂರ್ ಆಲಿ, ಇನಾಯತ್ ಉಲ್ಲಾ ಖಾನ್ ಅವರು ಉಚ್ಚಾಟಿತರಾದ ಕಾಂಗ್ರೆಸ್ ಮುಖಂಡರು. ಪಕ್ಷ ವಿರೋಧಿ ಚಟುವಟಿಕೆ, ನೇರವಾಗಿ ಪಕ್ಷದ ವಿರುದ್ಧ ಮಾತನಾಡಿದ್ದಾರೆ. ಸಾಮಾಜಿಕ
ಜಾಲತಾಣಗಳಲ್ಲಿ ಪಕ್ಷಕ್ಕೆ ನಷ್ಟ ಉಂಟು ಮಾಡುವಂತೆ ಚುನಾವಣೆ ಸಂದರ್ಭದಲ್ಲಿ ಮಾಡುತ್ತಿದ್ದಾರೆ. ಅಲ್ಪಸಂಖ್ಯಾತರ ವಿರೋಧಿಗಳು ಕಾಂಗ್ರೆಸ್ ನವರು ಎಂಬ ಅಪಪ್ರಚಾರ ಮಾಡುತ್ತಿದ್ದಾರೆ. ಅಲ್ಪಸಂಖ್ಯಾತರನ್ನು ದೇಶದಲ್ಲಿ ಕಾಂಗ್ರೆಸ್ ಮುಖಂಡರು
ತುಳಿಯುವ ಕೆಲಸ ಮಾಡುತ್ತಿಲ್ಲ. ಅಲ್ಪಸಂಖ್ಯಾತರಿಗೆ ಬೆಂಬಲವಾಗಿ ನಿಲ್ಲುತ್ತಾರೆ. ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ನಿಂತಿರುವುದು ಇತಿಹಾಸ ಎಂದು ಹೇಳಿದರು.
ಉದ್ದೇಶಪೂರ್ವಕವಾಗಿ ಚುನಾವಣಾ ಸಂದರ್ಭದಲ್ಲಿ ಅಲ್ಲಲ್ಲಿ ಸಭೆ ನಡೆಸಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡಿದರೆ ಹೊರತು ಕಾಂಗ್ರೆಸ್ ಪಕ್ಷದ ಬಗ್ಗೆ ಕೆಟ್ಟ ಅಭಿಪ್ರಾಯ ಬರುವಂತೆ ಮಾತನಾಡಿದರು. ಕಾಂಗ್ರೆಸ್ ಪಕ್ಷವು ಸರ್ವಧರ್ಮಗಳ ಪಕ್ಷ. ಕಾಂಗ್ರೆಸ್ ಮಾತ್ರ ಎಲ್ಲಾ ಸಮುದಾಯದವರ ಪರ ನಿಂತಿರುವುದು. ಎಲ್ಲಾ ಸಮಾಜದವರಿಗೂ ಪ್ರಾತಿನಿಧ್ಯವನ್ನು ಸಚಿವ ಸಂಪುಟದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ. ಕೆ. ಶಿವಕುಮಾರ್ ಮಾಡಿದ್ದಾರೆ. ಜನರನ್ನು ಎತ್ತಿ ಕಟ್ಟುವ ಕೆಲಸ ಮಾಡಿದ್ದು, ಇದನ್ನು ಪಕ್ಷ ಸಹಿಸಲು ಸಾಧ್ಯವಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರಾಗಲೀ, ಸಂಸದರಾಗಲೀ, ಜಿಲ್ಲಾ ಕಾಂಗ್ರೆಸ್ ಪಕ್ಷವಾಗಲೀ ಅಲ್ಪಸಂಖ್ಯಾತರ ವಿರೋಧಿಗಳಲ್ಲ. ಉಚ್ಚಾಟನೆ ಮಾಡಿದವರನ್ನು ಪಕ್ಷಕ್ಕೆ ತರುವ ಕೆಲಸ ಮಾಡಬಾರದು ಎಂದು ಸರ್ವಾನುಮತದಿಂದ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ದಾವಣಗೆರೆ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಜಿ. ಶಿವಕುಮಾರ್, ದಕ್ಷಿಣ ಬ್ಲಾಕ್ ಅಧ್ಯಕ್ಷ ಅಯೂಬ್ ಪೈಲ್ವಾನ್, ದಿನೇಶ್ ಕೆ. ಶೆಟ್ಟಿ. ಡಿ. ಬಸವರಾಜ್, ಅನಿತಾ ಬಾಯಿ ಮತ್ತಿತರರು ಹಾಜರಿದ್ದರು.
- Abdul Jabbar supporters
- Anti-party activities
- Congress disciplinary action
- Congress leaders expelled
- Davanagere Congress
- Davanagere South By-election
- HB Manjappa
- Karnataka Politics
- Prabha Mallikarjun
- SS Mallikarjun
- ಅಬ್ದುಲ್ ಜಬ್ಬಾರ್
- ಎಸ್. ಎಸ್. ಮಲ್ಲಿಕಾರ್ಜುನ್
- ಕರ್ನಾಟಕ ರಾಜಕಾರಣ
- ಕಾಂಗ್ರೆಸ್ ಶಿಸ್ತು ಕ್ರಮ
- ದಾವಣಗೆರೆ ಕಾಂಗ್ರೆಸ್
- ದಾವಣಗೆರೆ ದಕ್ಷಿಣ ಉಪಚುನಾವಣೆ
- ಪಕ್ಷ ವಿರೋಧಿ ಚಟುವಟಿಕೆ
- ಪ್ರಭಾ ಮಲ್ಲಿಕಾರ್ಜುನ್
- ಮುಖಂಡರ ಉಚ್ಚಾಟನೆ
- ಹೆಚ್.ಬಿ. ಮಂಜಪ್ಪ





Leave a comment