Home ದಾವಣಗೆರೆ ದಾವಣಗೆರೆಯ ಹಿರಿಯ ಕಾಂಗ್ರೆಸ್ ಮುಖಂಡ ಸೈಯದ್ ಸೈಫುಲ್ಲಾ ನಿಧನ; ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ
ದಾವಣಗೆರೆಬೆಂಗಳೂರು

ದಾವಣಗೆರೆಯ ಹಿರಿಯ ಕಾಂಗ್ರೆಸ್ ಮುಖಂಡ ಸೈಯದ್ ಸೈಫುಲ್ಲಾ ನಿಧನ; ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

Share
ದಾವಣಗೆರೆ
Share

ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷರಾದ ಸೈಯದ್ ಸೈಫುಲ್ಲಾ ಅವರು ನಿಧನರಾಗಿದ್ದಾರೆ.

ದಾವಣಗೆರೆಯ ರಾಜಕೀಯ ವಲಯದಲ್ಲಿ ದಶಕಗಳ ಕಾಲ ಸಕ್ರಿಯರಾಗಿದ್ದ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಡಿಸಿಎಂ ಸಂದೇಶ: “ಸೈಯದ್ ಸೈಫುಲ್ಲಾ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತುಂಬ ನೋವುಂಟಾಗಿದೆ. ಪಕ್ಷಕ್ಕಾಗಿ ಹಾಗೂ ಸಮಾಜಕ್ಕಾಗಿ ಅವರು ಮಾಡಿದ ಸೇವೆ ಸದಾ ಸ್ಮರಣೀಯವಾದುದು. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ ಮತ್ತು ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಡಿ.ಕೆ. ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles