ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸುದ್ದಿ ಕ್ಷಣದಲ್ಲಿ ಮಾತ್ರ Commissioner React:ಸರ್ಕಾರಿ ಭೂ ಕಬಳಿಕೆ ದೂರು ಬಂದಿದೆ, ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ: ಆಯುಕ್ತೆ ರೇಣುಕಾ

On: August 3, 2023 4:56 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:03-08-2023

ದಾವಣಗೆರೆ (Davanagere): ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಾರ್ಕ್, ಸಾರ್ವಜನಿಕ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಕುರಿತಂತೆ ದೂರು ಬಂದಿದೆ. ಈ ಬಗ್ಗೆ ವರದಿ ನೀಡುವಂತೆ ಕಂದಾಯ ಹಾಗೂ ಪಾಲಿಕೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತೆ (Commissioner) ರೇಣುಕಾ ತಿಳಿಸಿದರು.

ಮಾಧ್ಯಮದವರ ಜೊತೆ ಮಾತನಾಡಿದ ಅವರು, ಎಸ್. ಎಸ್. ಬಡಾವಣೆ 23 ನೇ ವಾರ್ಡ್ ಗೆ ಸೇರಿದ್ದಂಥ ಬುಸ್ನೂರು ಶಾಲೆ ಹಿಂಭಾಗದಲ್ಲಿ ಸಾರ್ವಜನಿಕ ಬಳಕೆಗೆ ಇರುವಂಥ ಸರ್ಕಾರಿ ಜಾಗ ಕಬಳಿಕೆ ಮಾಡಿರುವ ಕುರಿತಂತೆ ದೂರು ಬಂದಿದೆ.
ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿ ಮಾರಾಟ ಮಾಡಿರುವ ಕುರಿತಂತೆಯೂ ಆಪಾದನೆ ಇದ್ದು, ವರದಿ ಬಂದ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ. ಆಡಳಿತಾತ್ಮಕವಾಗಿ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕೋ ಅದೇ ರೀತಿಯಲ್ಲಿ
ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ: 

Davanagere: ನಕಲಿ ದಾಖಲೆ ಸೃಷ್ಟಿಸಿ ಬಿಜೆಪಿಯವರಿಂದ ಸರ್ಕಾರಿ ಭೂ ಕಬಳಿಕೆ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಪಾಲಿಕೆ ಕೈ ಸದಸ್ಯರ ಡಿಮ್ಯಾಂಡ್

ಮಹಾನಗರ ಪಾಲಿಕೆಯ ಪಕ್ಷೇತರ ಸದಸ್ಯನ ಪತ್ನಿ, ಆತನ ಅಣ್ಣನ ಪತ್ನಿ ಹೆಸರಿನಲ್ಲಿ ಪಾರ್ಕ್ ಜಾಗ ಕಬಳಿಸಲಾಗಿದೆ ಎಂಬ ದೂರು ಬಂದಿದೆ. ಈ ಬಗ್ಗೆಯೂ ವರದಿ ಕೇಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು
ಈ ಬಗ್ಗೆ ಮಾಹಿತಿ ಕೇಳಿದ್ದರು. ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಮೇಲಾಧಿಕಾರಿಗಳ ಅನುಮತಿ ಇಲ್ಲದೇ, ಮೂಲ ದಾಖಲಾತಿ ಪರಿಶೀಲಿಸದೇ, ಪಾಲಿಕೆ ಉದ್ಯಾನವನ ಜಾಗವನ್ನು ಅಕ್ರಮವಾಗಿ ನಮೂನೆ -3ರಲ್ಲಿ ಸೇರಿಸಿ ಡೋರ್ ನಂಬರ್
ಕೊಡಲಾಗಿದೆ. ತಪ್ಪು ಎಸಗಿದ ಕಾರಣಕ್ಕೆ ಕಳೆದ ಜುಲೈ 14ರಂದು ಪಾಲಿಕೆಯ ಕಂದಾಯ ಇಲಾಖೆಯ ಕರ ವಸೂಲಿಗಾರರಾದ ಸಿ. ಸುನೀತಾ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದರು.

Commissioner, Davanagere Commissioner, Davanagere Commissioner React,  Commissioner Statement, Commissioner News, Commissioner Suddi

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment