Home ದಾವಣಗೆರೆ ರೈತರಿಗೆ ತೊಂದರೆ ಕೊಟ್ಟರೆ ಹುಷಾರ್! ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಬ್ರೇಕ್: ಮನೆಗೆ ಬಂದು ಬೆದರಿಸಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ!
ದಾವಣಗೆರೆಕ್ರೈಂ ನ್ಯೂಸ್ಬೆಂಗಳೂರುವಾಣಿಜ್ಯ

ರೈತರಿಗೆ ತೊಂದರೆ ಕೊಟ್ಟರೆ ಹುಷಾರ್! ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಬ್ರೇಕ್: ಮನೆಗೆ ಬಂದು ಬೆದರಿಸಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ!

Share
ರೈತ
Share

ದಾವಣಗೆರೆ: ಅನಗತ್ಯವಾಗಿ ವರ್ತಕರಿಗೆ ಹಾಗೂ ಹೊಸ ಟ್ರೇಡಿಂಗ್ ಕಂಪನಿಗಳಿಗೆ ಲೈಸೆನ್ಸ್ ನೀಡುವ ಮೂಲಕ ರೈತರಿಗೆ ವಂಚನೆಯಾಗುತ್ತಿರುವುದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ, ಮಲ್ಲೇಬೆನ್ನೂರು ಹಾಗೂ ಹರಪನಹಳ್ಳಿ ಭಾಗಗಳಲ್ಲಿ ಅನಗತ್ಯವಾಗಿ ಟ್ರೇಡ್ ಲೈಸೆನ್ಸ್ ಪಡೆದು, ಕಂಪನಿಗಳನ್ನು ಆರಂಭಿಸಿ ರೈತರಿಗೆ ಹೆಚ್ಚಿನ ಬೆಲೆಯ ಆಮಿಷ ಒಡ್ಡಿ ಮೋಸ ಮಾಡುತ್ತಿರುವುದು ಕಂಡುಬಂದಿದೆ. ಸೂಕ್ತ ಪರಿಶೀಲನೆ ನಡೆಸದೆ ಲೈಸೆನ್ಸ್ ಕೊಡುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದರು.

ಮಕ್ಕಜೋಳ ಹಾಗೂ ಭತ್ತ ಖರೀದಿಸುವ ಕೆಲವರು ಎಪಿಎಂಸಿಗೆ ಕಟ್ಟಬೇಕಾದ ಸೇಸ್ (ತೆರಿಗೆ) ಪಾವತಿಸದೆ ಜಾರಿಕೊಳ್ಳುತ್ತಿದ್ದಾರೆ. ಅಧಿಕಾರಿಗಳು ಕೇವಲ ಬಿಲ್ ಹಾಕಿ ಸೇಸ್ ವಸೂಲಿ ಮಾಡುವುದಕ್ಕಷ್ಟೇ ಸೀಮಿತವಾಗದೆ, ಜಾಗರೂಕರಾಗಿ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು.

ರೈತರು ಮೋಸ ಹೋದ ನಂತರ ಪೊಲೀಸ್ ಠಾಣೆಗೆ ದೂರು ನೀಡಲು ಅಲೆಯುವುದನ್ನು ತಪ್ಪಿಸಲು, ಕೊಯ್ಲಿನ ಸಮಯದಲ್ಲೇ ಅವರಿಗೆ ಮುನ್ನೆಚ್ಚರಿಕೆ ಹಾಗೂ ಜಾಗೃತಿ ಮೂಡಿಸುವ ಕೆಲಸವಾಗಬೇಕು. ತಮ್ಮ ವ್ಯಾಪ್ತಿಯಲ್ಲಿ ನಡೆಯುವ ಅಕ್ರಮಗಳಿಗೆ ಎಪಿಎಂಸಿ ಕಾರ್ಯದರ್ಶಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳೇ ನೇರ ಹೊಣೆ. ಯಾವುದೇ ಲೋಪದೋಷ ಕಂಡುಬಂದಲ್ಲಿ ಜಾಗೃತಿ ದಳ ಹಾಗೂ ಎಪಿಎಂಸಿಯಿಂದ ಸೂಕ್ತ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ರೈತರಿಗೆ ತೊಂದರೆಯಾಗಬಾರದು.  ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

ಮೈಕ್ರೋಫೈನಾನ್ಸ್ ಮತ್ತು ಖಾಸಗಿ ಬ್ಯಾಂಕಿಂಗ್ ಸಂಸ್ಥೆಗಳ ಮುಖ್ಯಸ್ಥರು /ಪದಾಧಿಕಾರಿಗಳು ಸಾಲ ಮರುಪಾವತಿ ಮಾಡದ ಗ್ರಾಹಕರ ಮನೆ ಬಾಗಿಲಿಗೆ ತೆರಳಿ ಗಲಾಟೆ ಮಾಡುವುದು, ಬೆದರಿಕೆ ಹಾಕುವುದನ್ನು ಬಿಡಬೇಕು, ಕಾನೂನು ಚೌಕಟ್ಟಿನಡಿ ಶಾಂತಿಯುತವಾಗಿ ವ್ಯವಹರಿಸಬೇಕು, ಗ್ರಾಹಕರ ವಹಿವಾಟು ನಡೆಸುವಾಗ  ಆರ್‌ಬಿಐ ಮಾರ್ಗದರ್ಶಿ ಸೂತ್ರಗಳನ್ನ ಪಾಲಿಸಬೇಕು. ಇನ್ನು ಮುಂದೆ ಯಾವುದೇ ಗ್ರಾಹಕರು ಜಿಲ್ಲಾಡಳಿತಕ್ಕೆ ದೂರು ನೀಡಿದಲ್ಲಿ ಸೂಕ್ತ ಕಾನೂನು ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್‌, ಎಪಿಎಂಸಿ ಅಧಿಕಾರಿಗಳು , ಮೈಕ್ರೋಫೈನಾನ್ಸ್ ಮತ್ತು ಖಾಸಗಿ ಬ್ಯಾಂಕಿಂಗ್ ಸಂಸ್ಥೆಗಳ ಮುಖ್ಯಸ್ಥರು /ಪದಾಧಿಕಾರಿಗಳು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *