SUDDIKSHANA KANNADA NEWS/ DAVANAGERE/ DATE:25-07-2023
ದಾವಣಗೆರೆ (Davanagere): ದಾವಣಗೆರೆ (Davanagere) ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಜಿಲ್ಲಾಧಿಕಾರಿಯಾಗಿ ಎಂ. ವಿ. ವೆಂಕಟೇಶ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ಸರ್ಕಾರಿ ಸಚಿವಾಲಯ ಈ ಅಧಿಸೂಚನೆ ಹೊರಡಿಸಿದೆ. ಬೆಂಗಳೂರಿನ ಪಶುಸಂಗೋಪನೆ ಮತ್ತು ಪಶು ವೈದ್ಯಸೇವೆಗಳ ಇಲಾಖೆಯ ಆಯುಕ್ತರಾದ ಡಾ. ವೆಂಕಟೇಶ್ ಎಂ.ವ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೆ ದಾವಣಗೆರೆಯ ಡೆಪ್ಯುಟಿ ಕಮಿಷನರ್ ಆಗಿ ನಿಯುಕ್ತಿಗೊಳಿಸಲಾಗಿದೆ. ಶಿವಾನಂದ ಕಾಪಶಿ ಅವರನ್ನು ವರ್ಗಾವಣೆ ಮಾಡಲಾಗಿದೆ.
ಈ ಸುದ್ದಿಯನ್ನೂ ಓದಿ:
Diamond:ದಿನಗೂಲಿ ನೌಕರರ ಮಕ್ಕಳೀಗ ಸಿನಿಮಾ ಸ್ಟಾರ್ಸ್: ಡೈಮಂಡ್ ಕ್ರಾಸ್ ನ ದಾವಣಗೆರೆ ಯುವಕರ “ಡೈಮಂಡ್” ಯಶೋಗಾಥೆ
ಕರ್ನಾಟಕ ಮಾಹಿತಿ ಆಯೋಗದ ಕಾರ್ಯದರ್ಶಿ ಗಂಗೂ ಬಾಯಿ ರಮೇಶ ಮಾನಕರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಉತ್ತರ ಕನ್ನಡ ಜಿಲ್ಲೆಯ ಉಪ ಆಯುಕ್ತರಾಗಿ ನಿಯುಕ್ತಿಗೊಳಿಸಲಾಗಿದೆ. ಪ್ರಭುಲಿಂಗ ಕವಲಿಕಟ್ಟಿ ಅವರನ್ನು ವರ್ಗಾವಣೆ ಮಾಡಲಾಗಿದೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕ ಗಂಗಾಧರಸ್ವಾಮಿ ಜಿ.ಎಂ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೆ ನಿರ್ದೇಶಕರು, ಕೃಷಿ ಮಾರುಕಟ್ಟೆ ಇಲಾಖೆ ಬೆಂಗಳೂರು ವರ್ಗಾಯಿಸಲಾಗಿದೆ. ನಾಗೇಂದ್ರಪ್ರಸಾದ್ ಕೆ. ಅವರಿಗೆ ಪೋಸ್ಟಿಂಗ್ ಕೊಟ್ಟಿಲ್ಲ. ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ನಿರ್ದೇಶಕರು , ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕರು , ಆರ್ಡಿಪಿಆರ್ , ಬೆಂಗಳೂರು ಉಪಕಾರ್ಯದರ್ಶಿ ಗಂಗಾಧರಸ್ವಾಮಿ ಜಿ.ಎಂ. ರನ್ನು ವರ್ಗಾವಣೆ ಮಾಡಲಾಗಿದೆ. ಉತ್ತರಕನ್ನಡ ನೂತನ ಜಿಲ್ಲಾಧಿಕಾರಿಯಾಗಿ ಗಂಗೂಬಾಯಿ ಮಾನಕರ ಅವರನ್ನು ವರ್ಗಾವಣೆ ಮಾಡಲಾಗಿದೆ.