Home ಕ್ರೈಂ ನ್ಯೂಸ್ ದಾವಣಗೆರೆ: ಗೃಹಬಳಕೆ ಸಿಲಿಂಡರ್ ಅಕ್ರಮ ಮಾರಾಟಕ್ಕೆ ಜಿಲ್ಲಾಧಿಕಾರಿ ಬ್ರೇಕ್; 110 ಗ್ಯಾಸ್ ಸಿಲಿಂಡರ್ ವಶ!
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರುವಾಣಿಜ್ಯ

ದಾವಣಗೆರೆ: ಗೃಹಬಳಕೆ ಸಿಲಿಂಡರ್ ಅಕ್ರಮ ಮಾರಾಟಕ್ಕೆ ಜಿಲ್ಲಾಧಿಕಾರಿ ಬ್ರೇಕ್; 110 ಗ್ಯಾಸ್ ಸಿಲಿಂಡರ್ ವಶ!

Share
ದಾವಣಗೆರೆ
Share

ದಾವಣಗೆರೆ: ಜಿಲ್ಲೆಯಲ್ಲಿ ಗ್ರಾಹಕ ಬಳಕೆಯ ಅಡುಗೆ ಅನಿಲದ ಸಿಲಿಂಡರ್‌ಗಳ ಸರಬರಾಜು ಸಮರ್ಪಕವಾಗಿದ್ದು, ಅತ್ಯಲ್ವ ಅವಧಿಯಲ್ಲಿ ಗ್ರಾಹಕರಿಗೆ ತಲುಪಿಸಲಾಗುತ್ತಿದೆ. ಕೃತಕ ಅಭಾವ ಸೃಷ್ಠಿಸಿ, ಗ್ರಾಹಕರಿಗೆ ತಪ್ಪು ಮಾಹಿತಿ ನೀಡಿ, ಜನರನ್ನು ಗೊಂದಲಕ್ಕೀಡು ಮಾಡುವ ವ್ಯಕ್ತಿ ಅಥವಾ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಅವರು ತಿಳಿಸಿದ್ದಾರೆ.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಮಾತನಾಡುತ್ತಾ ಈ ಎಚ್ಚರಿಕೆ ನೀಡಿದ್ದಾರೆ.

ಗ್ರಾಹಕ ಬಳಕೆಯ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿಕೊಳ್ಳುತ್ತಿರುವುದು ಕಂಡುಬಂದಲ್ಲಿ ಅಂತಹವರ ವಿರುದ್ಧವೂ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಗೃಹಬಳಕೆಯ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿದ್ದ ವ್ಯಕ್ತಿಗಳನ್ನು ಗುರುತಿಸಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ ಅಲ್ಲದೇ ಅವರಿಂದ ಸುಮಾರು 110ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಕೆ.ಪಿ.ಮಧುಸೂದನ್ , ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಜಂಟಿ ನಿರ್ದೇಶಕಿ ಶ್ರೀಮತಿ ಹೆಚ್‌.ಸಿ.ಎಮ್.ರಾಣಿ, ಕೃಷಿ ಇಲಾಖೆಯ ಉಪನಿರ್ದೇಶಕ ಜಿಯಾವುಲ್ಲಾ, ರಾಜ್ಯ ಆಹಾರ ನಿಗಮದ ಜಿಲ್ಲಾ ವ್ಯವಸ್ಥಾಪಕ ನಾಗರಾಜ್‌, ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಫರ್ವೇಜ್‌ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles