ದಾವಣಗೆರೆ: ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗಕ್ಕಾಗಿ ವಿವಿಧ ಯೋಜನೆಗಳಿಗೆ ವೈಯಕ್ತಿಕ ಸಾಲ ಸೌಲಭ್ಯವನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆ ಮತ್ತು ನಿಯಮಗಳು:
ಈ ಹಿಂದೆ ನಿಗಮದ ಯಾವುದೇ ಯೋಜನೆಯಲ್ಲಿ ಸೌಲಭ್ಯ ಪಡೆದಿದ್ದಲ್ಲಿ, ಅಂತಹ ಫಲಾನುಭವಿಗಳು ಹಾಗೂ ಅವರ ಕುಟುಂಬದ ಸದಸ್ಯರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಯೋಜನೆಯ ಕುರಿತು ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ kaushalkar.com ಗೆ ಭೇಟಿ ನೀಡಬಹುದು.
ದಾವಣಗೆರೆ ಜಿಲ್ಲೆಯ ಅರ್ಜಿದಾರರು ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂ.ಸಂಖ್ಯೆ: 08192-230934 ನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿರುತ್ತದೆ. ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://kvcdcl.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ WWW.kaushalkar.com ಅಥವಾ ದೂ.ಸಂ: 08192-230934 ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
- Backward Classes Development Corporation
- D Devaraj Urs Corporation Loan
- Davanagere District News.
- DAVANAGERE NEWS
- Grama One Loan Application
- Self Employment Loan Karnataka 2026
- Seva Sindhu Karnataka
- ಕರ್ನಾಟಕ ಸರ್ಕಾರಿ ಯೋಜನೆಗಳು 2026.
- ಗ್ರಾಮ ಒನ್
- ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
- ದಾವಣಗೆರೆ ಸುದ್ದಿ
- ಸಾಲ ಸೌಲಭ್ಯ ಅರ್ಜಿ 2026
- ಸೇವಾ ಸಿಂಧು ಪೋರ್ಟಲ್
- ಸ್ವಯಂ ಉದ್ಯೋಗ ಸಾಲ





Leave a comment